ಮಡಿಕೇರಿ, ಜೂ. ೫: ಜಿಲ್ಲೆಯ ವಿವಿಧೆಡೆ ಕಾರ್ಯನಿರ್ವಹಿಸುತ್ತಿದ್ದ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ವಿವಿಧೆಡೆಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಮಡಿಕೇರಿ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಶ್ರೀನಿವಾಸ್ನಾಯಕ್, ಮಡಿಕೇರಿ ಪ್ರಾದೇಶಿಕ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ದಯಾನಂದ್, ಮಡಿಕೇರಿ ಸಂಶೋಧನಾ ವಿಭಾಗದ ವಲಯ ಅರಣ್ಯಾಧಿಕಾರಿ ಹುದ್ದೆಗೆ ಜಿ. ವಿನೀತ, ತಲಕಾವೇರಿ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಹುದ್ದೆಗೆ ಕೆ. ಕೊಟ್ರೇಶ, ಶ್ರೀಮಂಗಲ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಹುದ್ದೆಗೆ ಸಚಿನ್ ಎಸ್. ಪಾಟೀಲ್, ಮಡಿಕೇರಿ ಪ್ರಾದೇಶಿಕ ವಿಭಾಗದ ವಲಯ ಅರಣ್ಯಾಧಿಕಾರಿ ಹುದ್ದೆಗೆ ವೀರೇಂದ್ರ ಮರಿಬಸಣ್ಣವರ್ ಅವರನ್ನು ವರ್ಗಾಯಿಸಲಾಗಿದೆ.