ಮಡಿಕೇರಿ, ಜೂ. ೫ : ದೇಶವ್ಯಾಪಿ ಕೋವಿಡ್ ಸಂದಿಗ್ಧ ಪರಿಸ್ಥಿತಿ ಕಾಡುತ್ತಿದ್ದು, ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟçಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರ ನೇತೃತ್ವದ ನಿಯೋಗ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರನ್ನು ಭೇಟಿಯಾಗಿ ಉಚಿತ ಲಸಿಕೆಯ ಅಗತ್ಯತೆಯ ಬಗ್ಗೆ ವಿವರಿಸಿತು.
ನಂತರ ಮಾತನಾಡಿದ ಧರ್ಮಜ ಉತ್ತಪ್ಪ ಎಐಸಿಸಿ ಮತ್ತು ಕೆಪಿಸಿಸಿ ಹಮ್ಮಿಕೊಂಡಿರುವ “ಸಾರ್ವತ್ರಿಕ ಉಚಿತ ಲಸಿಕೆಗಾಗಿ ಮಾತನಾಡಿ” ಅಭಿಯಾನದ ಭಾಗವಾಗಿ ಮನವಿಯನ್ನು ಸಲ್ಲಿಸಲಾಗಿದೆ ಎಂದರು.
ಬಡವರು, ಕಾರ್ಮಿಕರು, ಜನಸಾಮಾನ್ಯರು ಸೇರಿದಂತೆ ಎಲ್ಲಾ ವರ್ಗದ ಮಂದಿಗೆ ಶೀಘ್ರ ಉಚಿತ ಲಸಿಕೆಯನ್ನು ನೀಡುವ ಮೂಲಕ ಕೋವಿಡ್ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕೆAದು ಹೇಳಿದರು.
ವಿಧಾನಪರಿಷತ್ ಸದಸ್ಯರಾದ ವೀಣಾಅಚ್ಚಯ್ಯ, ಕೆಪಿಸಿಸಿ ಸಂವಹನ ವಕ್ತಾರ ಟಿ.ಪಿ.ರಮೇಶ್, ಜಿಲ್ಲಾ ವಕ್ತಾರ ಟಾಟು ಮೊಣ್ಣಪ್ಪ, ಸಾಮಾಜಿಕ ಜಾಲತಾಣದ ಸೂರಜ್ ಹೊಸೂರು, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹನೀಫ್ ಸಂಪಾಜೆ, ಮುಕ್ಕಾಟಿರ ಸಂದೀಪ್ ಮತ್ತಿತರರು ಮನವಿ ಸಲ್ಲಿಸುವ ಸಂದರ್ಭ ಹಾಜರಿದ್ದರು.