ವೀರಾಜಪೇಟೆ, ಜೂ. ೬: ಖಾಸಗಿ ಬಸ್ ಕಾರ್ಮಿಕರಿಗೆ ವೀರಾಜಪೇಟೆ ವಿಧಾನ ಸಭಾಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಕಿಟ್‌ಗಳನ್ನು ವಿತರಿಸಿದರು.

ಕೊಡಗು ಜಿಲ್ಲಾ ಖಾಸಗಿ ಬಸ್‌ಗಳ ಕಾರ್ಮಿಕರಿಗೆ ವೀರಾಜಪೇಟೆ ತಾಲೂಕು ಕಚೇರಿಯ ಆವರಣದಲ್ಲಿ ವಿವಿಧ ದಾನಿಗಳಿಂದ ಸಂಗ್ರಹಿಸಲಾದ ಪರಿಹಾರ ಕಿಟ್‌ಗಳನ್ನು ಕಾರ್ಮಿಕರಿಗೆ ನೀಡಿದರು. ಬಳಿಕ ಮಾತನಾಡಿದ ಶಾಸಕರು, ಕೊರೊನಾ ಸೋಂಕಿನಿAದ ದೇಶದಲ್ಲಿ ಅಸಂಘಟಿತ ಕಾರ್ಮಿಕ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರು ಸಂಕಷ್ಟವನ್ನು ಎದುರಿಸುತ್ತಿದ್ದಾರೆ.

ರಾಜ್ಯ ಸರ್ಕಾರವು ವಿವಿಧ ಕ್ಷೇತ್ರದ ವರ್ಗಗಳ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್‌ಗಳನ್ನು ಘೋಷಣೆ ಮಾಡಿದೆ. ಖಾಸಗಿ ಬಸ್‌ಗಳನ್ನು ನಂಬಿಕೊAಡು ಜೀವನ ಸಾಗಿಸುತ್ತಿರುವ ಕಾರ್ಮಿಕರು ಬಸ್‌ಗಳ ಸಂಚಾರ ಸ್ಥಗಿತಗೊಂಡು ಅತಂತ್ರ ಸ್ಥಿತಿಯಲ್ಲಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಕಾರ್ಮಿಕರಿಗೆ ಪರಿಹಾರ ಕಿಟ್ ವಿತರಿಸಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಧಿಕಾರಿ ಶ್ರೀಧರ್, ತಹಶೀಲ್ದಾರ್ ಯೋಗಾನಂದ, ಜಿಲ್ಲಾ ಖಾಸಗಿ ಬಸ್ ಕಾರ್ಮಿಕ ಸಂಘದ ಅಧ್ಯಕ್ಷ ದಿನೇಶ್ ನಾಯರ್, ಕಾರ್ಯದÀರ್ಶಿ ಟಿ.ಎನ್. ಮಂಜುನಾಥ್, ಲೊಕೇಶ್‌ರೈ ಮತ್ತು ಸಂಘದ ನಿದೆೆÃðಶಕರುಗಳು ಹಾಗೂ ಸದಸ್ಯರು ಹಾಜರಿದ್ದರು.