ಗೋಣಿಕೊಪ್ಪಲು, ಜೂ. ೬: ರಾಜ್ಯದ ೨೨೪ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಕೋವಿಡ್ ಸೇವೆ ಮಾಡುತ್ತಿದ್ದಾರೆ. ಅಲ್ಲದೆ ೨೦೦ಕ್ಕೂ ಅಧಿಕ ಆ್ಯಂಬ್ಯುಲೆನ್ಸ್ ಕೊಡುಗೆಯಾಗಿ ರಾಜ್ಯದ ಕಾಂಗ್ರೆಸ್ ಮುಖಂಡರು ನೀಡಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ Pರ್ಯಾಧ್ಯಕ್ಷ ಧ್ರುವ ನಾರಾಯಣ್ ತಿಳಿಸಿದರು.

ಗೋಣಿಕೊಪ್ಪಲುವಿನ ಸರ್ಕಾರಿ ಆಸ್ಪತ್ರೆಗೆ ಕೆ.ಪಿಸಿ.ಸಿ. ಕಾನೂನು ಘಟಕದ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಅವರು

(ಮೊದಲ ಪುಟದಿಂದ) ಉಚಿತವಾಗಿ ನೀಡಿದ ಆ್ಯಂಬ್ಯುಲೆನ್ಸ್ ಹಾಗೂ ಆಕ್ಸಿಜನ್ ಕಾನ್ಸನ್‌ಟ್ರೇಟರ್ ಅನ್ನು ಹಸ್ತಾಂತರ ಮಾಡಿ ಮಾತನಾಡಿದ ಇವರು ಕಾಂಗ್ರೆಸ್ ಪಕ್ಷ ವಿರೋಧ ಪಕ್ಷದ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡು ಕೇವಲ ಆಡಳಿತ ಪಕ್ಷದ ಬಗ್ಗೆ ಟೀಕೆ ಮಾಡುತ್ತಿಲ್ಲ, ಸರ್ಕಾರ ಮಾಡಬೇಕಾದ ಕೆಲಸ ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದರು.

ಪೊನ್ನAಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ (ಮೊದಲ ಪುಟದಿಂದ) ಉಚಿತವಾಗಿ ನೀಡಿದ ಆ್ಯಂಬ್ಯುಲೆನ್ಸ್ ಹಾಗೂ ಆಕ್ಸಿಜನ್ ಕಾನ್ಸನ್‌ಟ್ರೇಟರ್ ಅನ್ನು ಹಸ್ತಾಂತರ ಮಾಡಿ ಮಾತನಾಡಿದ ಇವರು ಕಾಂಗ್ರೆಸ್ ಪಕ್ಷ ವಿರೋಧ ಪಕ್ಷದ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡು ಕೇವಲ ಆಡಳಿತ ಪಕ್ಷದ ಬಗ್ಗೆ ಟೀಕೆ ಮಾಡುತ್ತಿಲ್ಲ, ಸರ್ಕಾರ ಮಾಡಬೇಕಾದ ಕೆಲಸ ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದರು.

ಪೊನ್ನAಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ವಿಧಾನಪರಿಷತ್ ಸದಸ್ಯೆ ಶಾಂತೆಯAಡ ವೀಣಾಅಚ್ಚಯ್ಯ ಮಾತನಾಡಿ, ಕಾಂಗ್ರೆಸ್ ಪಕ್ಷ ಆರಂಭಿಕ ದಿನಗಳಿಂದ ಉತ್ತಮ ರೀತಿಯಲ್ಲಿ ಕೆಲಸ ಮಾಡಿಕೊಂಡು ಬರುತ್ತಿದೆ. ಆದರೆ ಬಿಜೆಪಿ ಪಕ್ಷ ಇದನ್ನು ಟೀಕೆ ಮಾಡುವುದನ್ನು ಕಡಿಮೆ ಮಾಡಿಲ್ಲ, ಆಡಳಿತ ಪಕ್ಷ ಉತ್ತಮ ರೀತಿಯಲ್ಲಿ ಕೆಲಸ ಮಾಡದೇ ಇರುವುದರಿಂದ ಕೋವಿಡ್ ಸಮಸ್ಯೆ ಇಷ್ಟು ಗಂಭೀರವಾಗಲೂ ಕಾರಣ ಎಂದು ಆರೋಪಿಸಿದರು.

ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಯದ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಸ್ವಾಗತಿಸಿದರು. ಪಕ್ಷದ ಮುಖಂಡರಾದ ಶಾಹಿದ್, ಅರುಣ್ ಮಾಚಯ್ಯ, ಅಬ್ದುಲ್ ರೆಹಮಾನ್ ಬಾಪು, ಕೇಚಮಾಡ ಸರಿತಾ ಪೂಣಚ್ಚ, ತೆರಸ ವಿಕ್ಟರ್, ಅಜಿತ್ ಅಯ್ಯಪ್ಪ, ಪಿ.ಆರ್.ಪಂಕಜ, ಬಿ.ಎನ್.ಪ್ರಥ್ರು, ಟಾಟು ಮೊಣ್ಣಪ್ಪ ಮೂಕಳೇರ ಸುಮಿತ, ಕೋಳೆರ ಭಾರತಿ, ಯಾಕೂಬ್, ಪ್ರಮೋದ್ ಗಣಪತಿ, ಅಂಕಿತ್ ಪೊನ್ನಪ್ಪ, ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ಕೊಲ್ಲಿರ ಬೋಪಣ್ಣ, ಮುಕ್ಕಾಟೀರ ಸಂದೀಪ್, ಅಬ್ದುಲ್ ಸಮ್ಮದ್ ಸೇರಿದಂತೆ ಇನ್ನಿತರ ಪ್ರಮುಖರು ಸೇರಿದಂತೆ ವಿವಿಧ ಭಾಗದಿಂದ ಆಗಮಿಸಿದ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ತಾಲೂಕು ವೈದ್ಯಾದಿಕಾರಿ

ಡಾ. ಯತಿರಾಜ್ ಅವರಿಗೆ ಆ್ಯಂಬ್ಯುಲೆನ್ಸ್ ಕೀ ಹಸ್ತಾಂತರ ಮಾಡಲಾಯಿತು. ಈ ವೇಳೆ ಸರ್ಕಲ್ ಇನ್ಸ್ಪೆಕ್ಟರ್ ಜಯರಾಂ, ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಹಾಜರಿದ್ದರು.

- ಹೆಚ್.ಕೆ.ಜಗದೀಶ್