ಮಡಿಕೇರಿ, ಜೂ. ೫: ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಅವರು ಕೊಡಗಿನ ಜನತೆಯ ಕೋವಿಡ್ ಸಂಕಷ್ಟಕ್ಕೆ ಸಹಾಯಹಸ್ತ ನೀಡುವ ನಿಟ್ಟಿನಲ್ಲಿ ಸುಸಜ್ಜಿತ ಆ್ಯಂಬ್ಯುಲೆನ್ಸ್ ಸೇವೆಯನ್ನು ಆರಂಭಿಸಲಿದ್ದು, ತಾ. ೬ ರಂದು (ಇಂದು) ಗೋಣಿಕೊಪ್ಪಲು ಆರೋಗ್ಯ ಕೇಂದ್ರಕ್ಕೆ ಹಸ್ತಾಂತರ ಮಾಡಲಿದ್ದಾರೆ ಎಂದು ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ತಿಳಿಸಿದ್ದಾರೆ.
ನಾಪೋಕ್ಲು: ನಾಪೋಕ್ಲು ವ್ಯಾಪ್ತಿಯ ಜನರ ಅನುಕೂಲಕ್ಕಾಗಿ ಕಾಂಗ್ರೆಸ್ ಪ್ರಮುಖ ಎಂ.ಎ. ಹ್ಯಾರೀಸ್ ಅವರ ಪುತ್ರ ಯುವ ಕಾಂಗ್ರೆಸ್ ಮುಖಂಡ ಮಹಮ್ಮದ್ ನಲಪಾಡ್ ನಾಪೋಕ್ಲು ಆಸ್ಪತ್ರೆಗೆ ಆಕ್ಸಿಜನ್ ಆ್ಯಂಬ್ಯುಲೆನ್ಸ್ ಅನ್ನು ಕೊಡುಗೆಯಾಗಿ ನೀಡಿದ್ದಾರೆ.
ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹನೀಫ್ ಸಂಪಾಜೆ ನಾಪೋಕ್ಲು ವ್ಯಾಪ್ತಿಯಲ್ಲಿನ ಆ್ಯಂಬ್ಯುಲೆನ್ಸ್ ಸಮಸ್ಯೆ ಬಗ್ಗೆ ಮಹಮ್ಮದ್ ನಲಪಾಡ್ ಅವರಿಗೆ ಮನವರಿಕೆ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಆ್ಯಂಬ್ಯುಲೆನ್ಸ್ ಅನ್ನು ನೀಡಲಾಯಿತು.
(ಮೊದಲ ಪುಟದಿಂದ) ಆ್ಯಂಬ್ಯುಲೆನ್ಸ್ನ ಕೀ ಅನ್ನು ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್ ಹಾಗೂ ವಲಯಾಧ್ಯಕ್ಷ ಮಾಚೆಟ್ಟಿರ ಕುಶು ಕುಶಾಲಪ್ಪ ಅವರಿಗೆ ಹನೀಫ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೆಚ್.ಎಸ್. ಪಾರ್ವತಿ, ಜಿಲ್ಲಾ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಅಬ್ದುಲ್ ರೆಹಮಾನ್, ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸೂರಜ್ ಹೊಸೂರು, ಎಮ್ಮೆಮಾಡು ಕಾಂಗ್ರೆಸ್ ವಲಯಾಧ್ಯಕ್ಷ ಹಂಸ, ಹೊದ್ದೂರು ಗ್ರಾಮ ಪಂಚಾಯಿತಿ ಸದಸ್ಯ ಕೊಟ್ಟಮುಡಿ ಹಂಸ, ನಾಪೋಕ್ಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಲೀಂ ಹ್ಯಾರೀಸ್, ಪಂಚಾಯಿತಿ ಸದಸ್ಯರಾದ ಅರುಣ್ ಬೇಬ, ವನಜಾಕ್ಷಿ, ಕಾಫಿ ಮಂಡಳಿ ಮಾಜಿ ಉಪಾಧ್ಯಕ್ಷ ಡಾ. ಸಣ್ಣುವಂಡ ಕಾವೇರಪ್ಪ, ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸಿರಾಜ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪಿ.ಎ. ಮಹಮ್ಮದ್ ಮತ್ತಿತರರು ಇದ್ದರು.