ಸಿದ್ದಾಪುರ, ಜೂ. ೫: ಮರದಿಂದ ಬಿದ್ದು ಕಾರ್ಮಿಕನೋರ್ವ ಮೃತ ಪಟ್ಟಿರುವ ಘಟನೆ ಅರೆಕಾಡು ಗ್ರಾಮದಲ್ಲಿ ನಡೆದಿದೆ. ಅರೆಕಾಡು ಗ್ರಾಮದ ನಿವಾಸಿ ಹಂಸ, ಹೆಚ್.ಎಂ. (೪೨) ಎಂಬವರು ಅರೆಕಾಡು ಗ್ರಾಮದ ಬಿದ್ದಯ್ಯ ಎಂಬವರ ಕಾಫಿ ತೋಟದಲ್ಲಿ ಮರ ಕಟಾವು ಮಾಡುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದಾರೆ. ಕೂಡಲೇ ಗಾಯಾಳು ಹಂಸ ಅವರನ್ನು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆಂದು ಕರೆತರುವಷ್ಟರಲ್ಲಿ ಅವರು ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದ್ದರು. ಈ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಪತ್ನಿ ಹಾಗೂ ಈರ್ವರು ಮಕ್ಕಳನ್ನು ಅಗಲಿದ್ದಾರೆ. ಮೃತದೇಹ ವನ್ನು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.