ಸಿದ್ದಾಪುರ, ಜೂ. ೬: ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಟ್ಟಣದಲ್ಲಿ ವ್ಯಾಪಾರ ಮಾಡುತ್ತಿರುವ ವರ್ತಕರಿಗೆ ಕೊರೊನಾ ಪರೀಕ್ಷೆ ನಡೆಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಸಾಬು ವರ್ಗಿಸ್ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನಿಲ್ ಕುಮಾರ್ ನೇತೃತ್ವದಲ್ಲಿ ನೆಲ್ಲಿಹುದಿಕೇರಿ ಪಟ್ಟಣ ವ್ಯಾಪ್ತಿಯ ವರ್ತಕರಿಗೆ ಗ್ರಾಮ ಪಂಚಾಯಿತಿ ವತಿಯಿಂದ ಗಂಟಲು ದ್ರವ ಪರೀಕ್ಷೆ ನಡೆಸಲು ಸೂಚನೆ ನೀಡಲಾಗಿತ್ತು.

ಶುಕ್ರವಾರದಂದು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ವರ್ತಕರ ಗಂಟಲು ದ್ರವ ಪರೀಕ್ಷೆ ಮಾಡಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿ ಅನಿಲ್‌ಕುಮಾರ್, ಆರೋಗ್ಯ ಇಲಾಖೆಯ ಸಿಬ್ಬಂದಿ ಗೀತಾ, ಆಶಾ ಕಾರ್ಯಕರ್ತರು ಟಾಸ್ಕ್ಫೋರ್ಸ್ ಸಮಿತಿಯ ಸದಸ್ಯರು ಹಾಜರಿದ್ದರು.