ಸಿದ್ದಾಪುರ, ಜೂ. ೭: ಕಾಡಾನೆಗಳ ಹಿಂಡುಗಳನ್ನು ಕಾಡಿಗೆ ಅಟ್ಟುವಲ್ಲಿ ಅರಣ್ಯ ಇಲಾಖಾಧಿಕಾರಿ ಗಳು ಹಾಗೂ ಸಿಬ್ಬಂದಿಗಳು ಯಶ್ವಸಿಯಾಗಿದ್ದಾರೆ.
ಸಿದ್ದಾಪುರ ವ್ಯಾಪ್ತಿಯ ಬೀಟಿಕಾಡು, ತೂಪನ ಕೊಲ್ಲಿ, ಬಜೆಕೊಲ್ಲಿ ಹಾಗೂ ವಡ್ಡರಕಾಡು ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿದ್ದ ಮರಿಯಾನೆಗಳು ಸೇರಿದಂತೆ ೨೫ಕ್ಕೂ ಅಧಿಕ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವಲ್ಲಿ ಮೂರು ವಿಭಾಗದ ಅರಣ್ಯ ಇಲಾಖಾಧಿಕಾರಿ ಗಳು ಹಾಗೂ ಸಿಬ್ಬಂದಿಗಳು ಆರ್ಆಟ್ಟಿ ತಂಡ ಯಶಸ್ವಿಯಾಗಿದ್ದಾರೆ.
ಸಿದ್ದಾಪುರದ ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಹಾಗೂ ಬಾಡಗ ಬಾಣಂಗಾಲ ಗ್ರಾಮದ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳ ಹಿಂಡು ಕಾಫಿ ತೋಟಗಳಲ್ಲಿ ದಾಂಧಲೆ ನಡೆಸುತ್ತಾ ಕೃಷಿ ಫಸಲುಗಳನ್ನು ನಾಶಪಡಿಸುತ್ತಿವೆ. ಇದಲ್ಲದೆ ಇತ್ತೀಚೆಗೆ ಕಾಡಾನೆಯು ದಾಳಿ ನಡೆಸಿ ಮೂವರನ್ನು ಬಲಿ ತೆಗೆದುಕೊಂಡಿತ್ತು. ಅಲ್ಲದೆ ಹಲವಾರು ಮಂದಿ ಕಾಡಾನೆ ದಾಳಿಗೆ ಸಿಲುಕಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಆಗ್ಗಿಂದಾಗೆ ಆನೆ-ಮಾನವ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳೆಗಾರರು ಹಾಗೂ ಕಾರ್ಮಿಕರು ಭಯಭೀತರಾಗಿದ್ದಾರೆ.
ಕಾಡಾನೆಗಳು ಕಾಫಿ ತೋಟ ಗಳಲ್ಲಿರುವ ಹಲಸಿನ ಕಾಯಿಯನ್ನು ತಿಂದು ತೋಟಗಳಲ್ಲೇ ಬೀಡುಬಿಟ್ಟು ಅರಣ್ಯ ಇಲಾಖಾಧಿಕಾರಿಗಳು, ಸಿಬ್ಬಂದಿಗಳೊAದಿಗೆ ಎಷ್ಟೇ ಕಾರ್ಯಾ ಚರಣೆ ನಡೆಸಿ ಅರಣ್ಯಕ್ಕೆ ಅಟ್ಟಿದ್ದರೂ ಕೂಡ ಮರಳಿ ರಾತ್ರಿ ಸಮಯದಲ್ಲಿ ಹಿಂತಿರುಗಿ ಕಾಫಿ ತೋಟಗಳಿಗೆ ಲಗ್ಗೆ ಇಡುತ್ತಿವೆ. ಇದರಿಂದಾಗಿ ಅರಣ್ಯ ಇಲಾಖಾಧಿಕಾರಿಗಳಿಗೆ ಸಮಸ್ಯೆಯಾಗಿ ರುತ್ತದೆ. ಈ ಹಿನ್ನೆಲೆಯಲ್ಲಿ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದರು. ಇದರಿಂದಾಗಿ ವೀರಾಜಪೇಟೆ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ಬೀಟಿಕಾಡು, ಕರಡಿಗೋಡು ಭಾಗದಲ್ಲಿ ಹಾಗೂ ತಿತಿಮತಿ ವಲಯಕ್ಕೆ ಒಳಪಡುವ ಬಜೆಕೊಲ್ಲಿ, ತೂಪನಕೊಲ್ಲಿ, ಬಾಡಗಬಾಣಂಗಾಲ ಗ್ರಾಮದ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ೨೫ಕ್ಕೂ ಅಧಿಕ ಕಾಡಾನೆಗಳನ್ನು ಪಟಾಕಿ ಸಿಡಿಸಿ ಕಾರ್ಯಾಚರಣೆ ನಡೆಸಿ ಅರಣ್ಯಕ್ಕೆ ಮಾಲ್ದಾರೆಯ ಮುಖ್ಯ ರಸ್ತೆಯ ಮೂಲಕ ಅಟ್ಟಿಸಿದರು.
ಎರಡು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ ಸಂದರ್ಭದಲ್ಲಿ ೪ ಮರಿಯಾನೆಗಳು ಹಾಗೂ ೪ ಸಲಗಗಳು ಮತ್ತು ಹೆಣ್ಣಾನೆ ಗಳು ಹಾಗೂ ಒಂದು ರೇಡಿಯೋ ಕಾಲರ್ ಅಳವಡಿಸಿದ ಕಾಡಾನೆ ಕಾಡಾನೆಗಳ ಹಿಂಡಿನಲ್ಲಿ ಕಂಡುಬAದಿವೆ ಎಂದು ಅರಣ್ಯ ಇಲಾಖಾಧಿಕಾರಿಗಳು ‘ಶಕ್ತಿ’ಗೆ ತಿಳಿಸಿದರು.
ಸಿದ್ದಾಪುರದ ಸುತ್ತಮುತ್ತಲ ಪ್ರದೇಶಗಳಲ್ಲಿ ವಿಪರೀತವಾಗಿ ಕಾಡಾನೆಗಳ ಹಾವಳಿ ಇದ್ದು, ಈ ಹಿಂದೆ ಕಾಡಾನೆಗಳನ್ನು ಹಿಡಿದು ಸ್ಥಳಾಂತರ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಮುಖಾಂತರ ವೀರಾಜಪೇಟೆ ಯಲ್ಲಿ ಹಾಗೂ ಮಡಿಕೇರಿಯ ಅರಣ್ಯ ಭವನದಲ್ಲಿ ಪ್ರತಿಭಟನೆ ಮಾಡಿ ರಾಜ್ಯದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರವರಿಗೆ ಮನವಿ ಪತ್ರ ನೀಡಲಾಗಿತ್ತು. ಈ ಸಂದರ್ಭದಲ್ಲಿ ಅರಣ್ಯ ಇಲಾಖಾಧಿಕಾರಿಗಳು ಉಪಟಳ ನೀಡುವ ಕಾಡಾನೆಗಳನ್ನು ಹಿಡಿಯುವ ಭರವಸೆಯನ್ನು ನೀಡಿದ್ದರು.
ಆದರೆ ಈವರೆಗೂ ಸರಕಾರದಿಂದ ಕಾಡಾನೆಗಳನ್ನು ಹಿಡಿಯಲು ಅನುಮತಿ ಲಭಿಸಿರುವುದಿಲ್ಲ. ಇದರಿಂದಾಗಿ ಮತ್ತಷ್ಟು ಸಮಸ್ಯೆಗಳು ಎದುರಾಗುತ್ತಿದೆ. ಅಲ್ಲದೆ ಕಾಡಾನೆಗಳ ಹಾವಳಿ ಯಿಂದಾಗಿ ಸಿದ್ದಾಪುರ ಸುತ್ತಮುತ್ತಲಿನ ಪ್ರದೇಶ ಕಾಫಿ ತೋಟಗಳ ಲೈನ್ ಮನೆಗಳಿಗೆ ಸಂಜೆ ವಾಹನಗಳಲ್ಲಿ ತೆರಳಲು ಕೂಡ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಹಿರಿಯ ಕಾಫಿ ಬೆಳೆಗಾರ ಅಜ್ಜಿನೀಕಂಡ ರಾಜು ಅಪ್ಪಯ್ಯ ತಿಳಿಸಿದ್ದಾರೆ.
ಕಾಡಾನೆಗಳ ಕಾರ್ಯಾಚರಣೆ ಸಂದರ್ಭ ವೀರಾಜಪೇಟೆ ಡಿಸಿಎಫ್ ಚಕ್ರಪಾಣಿ ಮಾರ್ಗದರ್ಶನದಲ್ಲಿ ವೀರಾಜಪೇಟೆ ವಲಯ ಅರಣ್ಯಾಧಿಕಾರಿ ಕಳ್ಳೀರ ದೇವಯ್ಯ, ತಿತಿಮತಿ ವಲಯ ಅರಣ್ಯಾಧಿಕಾರಿ ಅಶೋಕ್, ಉಪವಲಯ ಅರಣ್ಯಾಧಿಕಾರಿಗಳಾದ ಶ್ರೀನಿವಾಸ್, ಸಂಜೀತ್ ಸೋಮಯ್ಯ ಹಾಗೂ ಮೂರು ವಲಯಗಳ ಅರಣ್ಯ ಇಲಾಖಾ ಸಿಬ್ಬಂದಿಗಳು ತಿತಿಮತಿ, ಅಮ್ಮತ್ತಿ, ಚೆನ್ನಂಗಿ ಭಾಗದ ಆರ್ಆರ್ಟಿ ತಂಡದ ಸಿಬ್ಬಂದಿಗಳು ಕಾರ್ಯಾ ಚರಣೆಯಲ್ಲಿ ಪಾಲ್ಗೊಂಡಿದ್ದರು.
ವರದಿ: ವಾಸು ಎ.ಎನ್.