ಮಡಿಕೇರಿ, ಜೂ.೭: ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ೧೧ ಗಂಟೆ ವೇಳೆಗೆ ಕಳೆದ ೨೪ ಗಂಟೆಗಳಲ್ಲಿ ೧೮೩ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ೧೬೭ ಆರ್.ಟಿ.ಪಿ.ಸಿ.ಆರ್ ಮತ್ತು ೧೬ ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ.
ಮಡಿಕೇರಿ ತಾಲೂಕಿನಲ್ಲಿ ೪೩ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ. ಈ ಪೈಕಿ ೪೧ ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು ೨ ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ.
ಸೋಮವಾರಪೇಟೆ ತಾಲೂಕಿನಲ್ಲಿ ೯೦ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ. ಈ ಪೈಕಿ ೭೭ ಆರ್.ಟಿ.ಪಿ.ಸಿ.ಆರ್ ಮತ್ತು ೧೩ ಪ್ರಕರಣಗಳು ರ್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ.
ವೀರಾಜಪೇಟೆ ತಾಲೂಕಿನಲ್ಲಿ ೫೦ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೪೯ ಆರ್.ಟಿ.ಪಿ.ಸಿ.ಆರ್ ಮತ್ತು ೧ ಪ್ರಕರಣ ರ್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೨೬,೧೪೧ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೨೫೨ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೨೩,೬೬೮ ಮಂದಿ ಗುಣಮುಖರಾಗಿದ್ದಾರೆ. ೨೧೩೬ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೨ ಸಾವು ಉಂಟಾಗಿದ್ದು, ಒಟ್ಟು ೩೩೭ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೨೯೧ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.೧೨.೩೧ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.