ನಾಪೋಕ್ಲು, ಜೂ. ೭: ನಾಪೋಕ್ಲು ಗ್ರಾಮ ಪಂಚಾಯಿತಿ ೨೩ ಸದಸ್ಯರನ್ನೊಳಗೊಂಡಿದ್ದು, ಹೆಚ್ಚಿನ ವ್ಯಾಪ್ತಿಯನ್ನು ಹೊಂದಿರುವ ದೊಡ್ಡ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆದರೆ, ಇಲ್ಲಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಎಮ್ಮೆಮಾಡು ಗ್ರಾಮ ಪಂಚಾಯಿತಿಗೂ ಹೆಚ್ಚುವರಿಯಾಗಿ ನೇಮಿಸಲಾಗಿದೆ. ಆದುದರಿಂದ ಅಭಿವೃದ್ಧಿ ಅಧಿಕಾರಿಯವರಿಗೆ ಈ ಪಂಚಾಯಿತಿಯಲ್ಲಿ ವಾರದ ಎಲ್ಲಾ ದಿನ ಕಾರ್ಯನಿರ್ವಹಿಸಲು ಸಾಧ್ಯವಾಗದೆ ಪಂಚಾಯಿತಿಯ ಅಭಿವೃದ್ಧಿ ಕುಂಠಿತಗೊಳ್ಳುವ ಸಾಧ್ಯತೆ ಕಂಡು ಬರುತ್ತಿದೆ. ಮಳೆಗಾಲ ಆರಂಭವಾಗುತ್ತಿದ್ದು, ಈ ವ್ಯಾಪ್ತಿಯಲ್ಲಿ ಪ್ರವಾಹ ಉಂಟಾಗುವ ಹಲವಾರು ಪ್ರದೇಶಗಳಿವೆ. ಆದುದರಿಂದ ಈ ಎಲ್ಲಾ ಸಮಸ್ಯೆಗಳನ್ನು ಮನಗಂಡು ಪಂಚಾಯಿತಿಗೆ ನೂತನ ಅಭಿವೃದ್ಧಿ ಅಧಿಕಾರಿಯನ್ನು ನೇಮಿಸಬೇಕೆಂದು ಈ ವ್ಯಾಪ್ತಿಯ ಸಾರ್ವಜನಿಕರು ಆಗ್ರಹಿಸಿದ್ದಾರೆ.