ಮಡಿಕೇರಿ, ಜೂ. ೮: ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ತಾ. ೧೧ ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಬೆಳಗ್ಗೆ ೧೧ ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೋವಿಡ್ ೧೯ ಸೋಂಕು ನಿಯಂತ್ರಣ ಹಾಗೂ ಸೋಂಕಿತರ ಚಿಕಿತ್ಸೆಗೆ ಸಂಬAಧಿಸಿದAತೆ ಕೈಗೊಂಡ ಮುಂಜಾಗ್ರತ ಕ್ರಮಗಳ ಕುರಿತು ಹಾಗೂ ಮಳೆಯ ಹಿನ್ನೆಲೆಯಲ್ಲಿ ಕೈಗೊಳ್ಳ ಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧಿಕಾರಿ ಯವರು ಹಾಗೂ ಸಂಬAಧಪಟ್ಟ ಅಧಿಕಾರಿಗಳ ಜೊತೆ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಬಳಿಕ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದಲ್ಲಿ ಪ್ರವಾಹ ಸಂತ್ರಸ್ತರಿಗಾಗಿ ನಿರ್ಮಾಣ ಮಾಡಿರುವ ೨೨ ಮನೆಗಳ ಪಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಿದ್ದಾರೆ. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪ್ರಾರಂಭ ವಾಗಿರುವ ಕೋವಿಡ್-೧೯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಹಾಗೂ ವಿವಿಧ ಕೋವಿಡ್ ಕೇರ್ ಸೆಂಟರ್ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.

ನಂತರ ಸಂಜೆ ೪ ಗಂಟೆಗೆ ವೀರಾಜಪೇಟೆ ತಾಲೂಕು ಆಸ್ಪತ್ರೆಯಲ್ಲಿ ನೂತನವಾಗಿ ಪ್ರಾರಂಭಿಸ ಲಾಗುತ್ತಿರುವ ಆಕ್ಸಿಜನ್ ಜನರೇಷನ್ ಪ್ಲಾಂಟ್‌ನ ಪರಿವೀಕ್ಷಣೆ ನಡೆಸಲಿದ್ದಾರೆ. ಸಂಜೆ ೫ ಗಂಟೆಗೆ ಪಾಲಿಬೆಟ್ಟದಲ್ಲಿ ‘ಡಾಕ್ಟರ್ ಫಾರ್ ಯು’ ಎನ್‌ಜಿಒ ಸಹಯೋಗದಲ್ಲಿ ಆರಂಭಿಸಿರುವ ಡಿಸಿಎಚ್‌ಸಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಉಸ್ತುವಾರಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಟಿ.ಎನ್.ರವಿಪ್ರಕಾಶ್ ತಿಳಿಸಿದ್ದಾರೆ