ಮಡಿಕೇರಿ, ಜೂ.೮: ಜಿಲ್ಲೆಯಲ್ಲಿ ಮಂಗಳವಾರ ೧೮೪ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೧೦೬ ಆರ್.ಟಿ.ಪಿ.ಸಿ.ಆರ್ ಮತ್ತು ೭೮ ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ.
ಮಡಿಕೇರಿ ತಾಲೂಕಿನಲ್ಲಿ ೪೫ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೩೭ ಪ್ರಕರಣಗಳು ಆರ್ಟಿಪಿಸಿಆರ್ ಮತ್ತು ೮ ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ ೮೨ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೩೯ ಆರ್ಟಿಪಿಸಿಆರ್ ಮತ್ತು ೪೩ ಪ್ರಕರಣಗಳು ರ್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವೀರಾಜಪೇಟೆ ತಾಲೂಕಿನಲ್ಲಿ ೫೭ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೩೦ ಆರ್ಟಿಪಿಸಿಆರ್ ಮತ್ತು ೨೭ ಪ್ರಕರಣ ರ್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೨೬,೩೨೫ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೨೭೩ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೨೩,೯೪೧ ಮಂದಿ ಗುಣಮುಖರಾಗಿದ್ದಾರೆ. ೨೦೪೩ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೪ ಸಾವು ಉಂಟಾಗಿದ್ದು, ಒಟ್ಟು ೩೪೧ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ಮೆAಟ್ ವಲಯಗಳ ಸಂಖ್ಯೆ ೨೭೮ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೧೧.೫೩ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.