ಕುಶಾಲನಗರ, ಜೂ. ೮: ಮಾಜಿ ಸೈನಿಕ ತನ್ನ ಮನೆಯಲ್ಲಿ ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಶಾಲನಗರ ಬಸವೇಶ್ವರ ಬಡಾವಣೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಇಲ್ಲಿನ ನಿವಾಸಿ ಕೋಲ್ಮಾಡಂಡ ಪೊನ್ನಪ್ಪ (೬೧) ಎಂಬುವವರು ಆತ್ಮಹತ್ಯೆಗೆ ಶರಣಾದ ದುರ್ದೈವಿ. ತನ್ನ ಮನೆಯಲ್ಲಿ ಕೋವಿಯಿಂದ ಗುಂಡು ಹೊಡೆದುಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಘಟನೆ ಸಂದರ್ಭ ಮನೆಯಲ್ಲಿ ಮೃತ ಪೊನ್ನಪ್ಪ ಅವರ ವೃದ್ಧೆ ತಾಯಿ, ಪತ್ನಿ, ಪುತ್ರ ಇದ್ದರು ಎನ್ನಲಾಗಿದೆ. ಕುಶಾಲನಗರ ಪಟ್ಟಣ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.