‘ಶಕ್ತಿ’ ವರದಿ ಫಲಶೃತಿ
ನಾಪೋಕ್ಲು, ಜೂ. ೮: ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ `ಎಲ್ಲಾ ವ್ಯವಸ್ಥೆಗಳಿರುವ ನಾಪೋಕ್ಲು ಆಸ್ಪತ್ರೆಯಲ್ಲಿ ವೈದ್ಯರಿಲ್ಲ’ ಎಂಬ ವರದಿಗೆ ಶಾಸಕರಾದ ಕೆ.ಜಿ.ಬೋಪಯ್ಯ ಹಾಗೂ ಜಿಲ್ಲಾ ವೈದ್ಯಾಧಿಕಾರಿ ಡಾ. ಮೋಹನ್ ಸ್ಪಂದಿಸಿದ್ದಾರೆ ಎಂದು ನಾಪೋಕ್ಲು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ಹಾಗೂ ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕ ಶಿವಚಾಳಿಯಂಡ ಅಂಬಿ ಕಾರ್ಯಪ್ಪ ತಿಳಿಸಿದ್ದಾರೆ.
ಈ ಬಗ್ಗೆ ‘ಶಕ್ತಿ’ಗೆ ಮಾಹಿತಿ ನೀಡಿದ ಅವರು ವರದಿಯ ಬಗ್ಗೆ ಶಾಸಕರಿಗೆ ಮತ್ತು ಜಿಲ್ಲಾ ವೈದ್ಯಾಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಈಗಾಗಲೇ ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ೩ ತಜ್ಞವೈದ್ಯರ ನೇಮಕವಾಗಿದೆ. ಆದರೆ, ಯಾರೂ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ. ಒಂದು ವಾರದ ಒಳಗೆ ಬದಲಿ ವೈದ್ಯರ ನೇಮಕಕ್ಕೆ ಕ್ರಮಕೈಗೊಳ್ಳಲಾಗುವದು ಎಂದು ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.