ಸಿದ್ದಾಪುರ, ಜೂ. ೯: ಮುಂಗಾರುಮಳೆ ಆರಂಭವಾದ ಹಿನ್ನೆಲೆಯಲ್ಲಿ ವೀರಾಜಪೇಟೆ ತಾಲೂಕಿನ ವಿವಿಧೆಡೆ ಕೃಷಿ ಚಟುವಟಿಕೆ ಆರಂಭಿಸಲು ಗದ್ದೆಗಳನ್ನು ಉಳುಮೆ ಮಾಡುತ್ತಿರುವುದು ಕಂಡುಬರುತ್ತಿದೆ. ಕಳೆದ ಒಂದು ವಾರದಿಂದ ಆಗಿಂದಾಗ್ಗೆ ವೀರಾಜಪೇಟೆ ತಾಲೂಕಿನ ವಿವಿಧೆಡೆ ಮುಂಗಾರು ಮಳೆ ಸುರಿದ ಹಿನ್ನೆಲೆಯಲ್ಲಿ ಭತ್ತದ ಗದ್ದೆಗಳಲ್ಲಿ ಕೃಷಿಕರು ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.