ಮಡಿಕೇರಿ, ಜೂ. ೯: ಜಿಲ್ಲೆಯ ಯಾವ ಯಾವ ಗ್ರಾಮಗಳಲ್ಲಿ ೨೦ ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳು ಕಂಡುಬAದಿದೆ, ಅಂತಹ ಗ್ರಾಮಗಳಿಗೆ ತಹಶೀಲ್ದಾರ್, ತಾ.ಪಂ. ಇಒ, ಡಿವೈಎಸ್‌ಪಿ, ತಾಲೂಕು ವೈದ್ಯಾಧಿಕಾರಿ ಹಾಗೂ ನೋಡಲ್ ಅಧಿಕಾರಿಗಳು ಭೇಟಿ ನೀಡಿ, ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳ ಬೇಕಿರುವ ಮುನ್ನೆಚ್ಚರಿಕೆ ಬಗ್ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಡಳಿತ ಭವನದಲ್ಲಿ ವೀಡಿಯೋ ಸಂವಾದ ಮೂಲಕ ಶುಕ್ರವಾರ ತಹಶೀಲ್ದಾರರು ಸೇರಿದಂತೆ ತಾಲೂಕು ಮಟ್ಟದ ಜೊತೆ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಕಡಿಮೆ ಯಾಗುತ್ತಿದೆ. ಆದರೆ ಜಿಲ್ಲೆಯ ಐದು ತಾಲೂಕುಗಳನ್ನು ಗಮನಿಸಿದಾಗ ಇನ್ನೂ ಬಹಳ ಎಚ್ಚರ ವಹಿಸುವುದು ಅತ್ಯಗತ್ಯವಾಗಿದೆ. ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆಹಚ್ಚಿ ಕೋವಿಡ್ ಪರೀಕ್ಷೆ ಮಾಡಿಸಬೇಕು. ಆ ನಿಟ್ಟಿನಲ್ಲಿ ಸೂಕ್ಷö್ಮ ಪ್ರದೇಶಗಳನ್ನು ಗುರುತಿಸಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿ ಶೇ ೧೨ ರಷ್ಟು, ವೀರಾಜಪೇಟೆ ತಾಲೂಕಿನಲ್ಲಿ ೧೧ ರಷ್ಟು ಹಾಗೂ ಸೋಮವಾರಪೇಟೆ ತಾಲೂಕು ಶೇ.೧೪ ರಷ್ಟು ಪಾಸಿಟಿವಿಟಿ ಪ್ರಮಾಣ ಕಂಡುಬರುತ್ತಿದೆ. ಆದ್ದರಿಂದ ಪಾಸಿಟಿವಿಟಿ ಪ್ರಮಾಣವನ್ನು ಕಡಿಮೆ ಮಾಡಲು ಪ್ರತಿ ಹಂತದ ಅಧಿಕಾರಿಗಳು ತಂಡವಾಗಿ ಕರ್ತವ್ಯ ನಿರ್ವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು. ಜಿಲ್ಲೆಯಲ್ಲಿ ಕೋವಿಡ್ ಆರೈಕೆ ಕೇಂದ್ರಗಳು ಉತ್ತಮವಾಗಿ ನಡೆಯುತ್ತಿದ್ದು, ಪೊನ್ನಂಪೇಟೆ ಮತ್ತು ಸೋಮವಾರಪೇಟೆ ತಾಲೂಕಿನಲ್ಲಿ ಕೋವಿಡ್ ಆರೈಕೆ ಕೇಂದ್ರ ತೆರೆಯಬೇಕಿದ್ದಲ್ಲಿ ಅಗತ್ಯ ಕ್ರಮವಹಿಸಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್ ಅವರು ಕೋವಿಡ್ ನಿರೋಧಕ ಲಸಿಕೆ ನೀಡುವಲ್ಲಿ ಮುಂಚೂಣಿ ಕಾರ್ಯಕರ್ತರು ಹಾಗೂ ಕಾರ್ಮಿಕರಿಗೆ ಆದ್ಯತೆಯಲ್ಲಿ ಲಸಿಕೆ ನೀಡಬೇಕು ಎಂದರು. ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಗೋವಿಂದರಾಜು ಸೋಮವಾರಪೇಟೆ ತಾಲೂಕಿನಲ್ಲಿ ಕೋವಿಡ್ ೧೯ ನಿಯಂತ್ರಣಕ್ಕೆ ಶ್ರಮಿಸಲಾಗುತ್ತಿದೆ. ಹಾಗೆಯೇ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಲಾಗಿದೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ನೋಡಲ್ ಅಧಿಕಾರಿಗಳಾದ ಪಿ. ಶ್ರೀನಿವಾಸ್, ಮಚ್ಚಾಡೊ, ಕೆ.ಟಿ. ದರ್ಶನ್, ತಹಶೀಲ್ದಾರರಾದ ಯೋಗಾನಂದ, ಸೋಮವಾರಪೇಟೆ ತಾಲೂಕು ವೈದ್ಯಾಧಿಕಾರಿ ಡಾ. ಶ್ರೀನಿವಾಸ್, ವಿರೂಪಾಕ್ಷ, ಪೌರಾಯುಕ್ತ ಎಸ್.ವಿ. ರಾಮದಾಸ್, ಪ.ಪಂ.ಇಒ ಶ್ರೀಧರ, ನಾಚಪ್ಪ, ಇತರರು ಕೋವಿಡ್ ನಿಯಂತ್ರಣ ಸಂಬAಧ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಬಳಿಕ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪವನ್ನು ಎದುರಿಸುವಲ್ಲಿ ಅಗತ್ಯ ಮುನ್ನೆಚ್ಚರ ವಹಿಸಬೇಕು. ಆ ದಿಸೆಯಲ್ಲಿ ‘ಪರಿಹಾರ ಕೇಂದ್ರ’ ಆರಂಭಿಸಬೇಕು, ಸೂಕ್ಷö್ಮ ಪ್ರದೇಶದ ಜನರಿಗೆ ಅಗತ್ಯ ಮುನ್ನೆಚ್ಚರ ಮಾಹಿತಿ ನೀಡಬೇಕು ಎಂದರು.