ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಇನ್ನೇನು ಪ್ರಾರಂಭ ವಾಗಲಿದ್ದು, ರೈತರು ತಮ್ಮ ತಮ್ಮ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿ ದ್ದಾರೆ. ಈ ಸಂದÀರ್ಭದಲ್ಲಿ ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ ರೈತರಿಗೆ ಭತ್ತ, ಕಾಳು ಮೆಣಸು, ಅಡಿಕೆ ಮತ್ತು ಶುಂಠಿ ಬೆಳೆಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗರೂಕತಾ ಕ್ರಮಗಳನ್ನು ಸೂಚಿಸಿದೆ.
ಕಾಳುಮೆಣಸು: v ಚಿಬ್ಬು ರೋಗವನ್ನು ಹತೋಟಿ ಮಾಡಲು ಕಾರ್ಬೆಂಡೆಜಿಮ್ + ಮ್ಯಾಂಕೋಜೆಬ್ (ಸಾಫ್ ಕಂಪಾನಿಯನ್, ಸ್ಪೀಂಟ್) ೨ ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರಸಿ ಸಿಂಪಡಿಸುವುದು.v ರೋಗ ಬಾಧೆಯಿಂದ ಬಳಲಿ ಸತ್ತು ಹೋದ ಬಳ್ಳಿಗಳನ್ನು ಬೇರು ಸಮೇತ ಕಿತ್ತು ತೋಟದಿಂದ ಹೊರಗೊಯ್ದು ನಾಶಪಡಿಸಬೇಕು.v ಪ್ರತೀ ಬಳ್ಳಿಗೆ ೫೦ ರಿಂದ ೬೦ ಗ್ರಾಂ ಟ್ರೆöÊಕೋಡರ್ಮ ಎಂಬ ಜೈವಿಕ ಶಿಲೀಂಧ್ರವನ್ನು ೧ ಕೆ.ಜಿ ಬೇವಿನ ಹಿಂಡಿ ಅಥವಾ ೫ ಕೆ.ಜಿ ಕೊಟ್ಟಿಗೆ ಗೊಬ್ಬರದಲ್ಲ್ಲಿ ಮಿಶ್ರಣ ಮಾಡಿ ಬುಡಕ್ಕೆ ಹಾಕಬೇಕು ಅಥವಾ ೪ ಕೆ.ಜಿ ಅರ್ಕಾ ಸೂಕ್ಷಾ÷್ಮಣು ಜೀವಿಗಳ ಸಮೂಹ ಮತ್ತು ಒಂದು ಕೆ.ಜಿ ಬೆಲ್ಲವನ್ನು ೨೦೦ ಲೀಟರ್ ನೀರಿನಲ್ಲಿ ಮಿಶ್ರಣ ಮಾಡಿ ಗಿಡದ ಬುಡ ಭಾಗಕ್ಕೆ ನೇರವಾಗಿ (೪ ರಿಂದ ೫ ಲೀಟರ್ನಷ್ಟು) ಸುರಿಯಬೇಕು. vಬೇಸಾಯ ಕ್ರಮಗಳನ್ನು ಅನುಸರಿಸುವಾಗ ಬಳ್ಳಿಯ ಬೇರುಗಳಿಗೆ ಗಾಯಗಳಾಗದಂತೆ ನೋಡಿಕೊಳ್ಳಬೇಕು.v ಮುನ್ನೆಚ್ಚರಿಕೆಯಾಗಿ ಮುಂಗಾರಿಗೆ ಮುನ್ನ ಬಳ್ಳಿ, ಎಲೆ ಮತ್ತು ಕಾಂಡ ಪೂರ್ಣ ತೊಯ್ಯುವಂತೆ ಶೇ. ೧ ರ ಬೋರ್ಡೊ ದ್ರಾವಣವನ್ನು ಸಿಂಪರಣೆ ಮಾಡಬೇಕು. v ಟ್ರೆöÊಕೋಡರ್ಮ ಅಥವಾ ಅರ್ಕಾ ಸೂಕ್ಷಾ÷್ಮಣು ಜೀವಿಗಳ ಸಮೂಹವನ್ನು ಬುಡಕ್ಕೆ ಹಾಕದಿದ್ದರೆ ಪ್ರತಿ ಬಳ್ಳಿಗೆ ೩ ರಿಂದ ೫ ಲೀಟರ್ ಕಾಪರ್ ಆಕ್ಸಿಕ್ಲೋರೈಡ್ (ಬ್ಯಾರಲ್ಗೆ ೫೦೦ ಗ್ರಾಂ) ದ್ರಾವಣದಿಂದ ಬಳ್ಳಿಯ ಬುಡದ ಭಾಗವನ್ನು ನೆನೆಸಬೇಕು ಮತ್ತು ಶೇ. ೧ ರ ಬೋರ್ಡೊ ದ್ರಾವಣ ಅಥವಾ ೩.೦ ಮಿ. ಲಿ. ಪೊಟ್ಯಾಸಿಯಂ ಪಾಸ್ಪೋನೇಟ್ನ್ನು ಪ್ರತಿ ಲೀಟರ್ ನೀರಿಗೆ ಬೆರಸಿದ ದ್ರಾವಣವನ್ನು ಎಲೆಗಳಿಗೆ ಸಿಂಪರಣೆೆ ಮಾಡಬೇಕು.v ಶಿಫಾರಸ್ಸು ಮಾಡಿದ ಪ್ರಮಾಣದ ರಸಗೊಬ್ಬರವನ್ನು ಮಾತ್ರ ಕೊಡಬೇಕು. ಪ್ರತಿ ಗಿಡಕ್ಕೆ ೩೦೦ ಗ್ರಾಂ ಯೂರಿಯಾ, ೨೭೫ ಗ್ರಾಂ ಶಿಲಾರಂಜಕ ಮತ್ತು ೪೫೦ ಗ್ರಾಂ ಎಂ.ಓ.ಪಿನ್ನು ಕೊಡಬೇಕು.ಮೇಲೆ ತಿಳಿಸಿರುವ ಪ್ರಮಾಣದ ಗೊಬ್ಬರವು ಒಂದು ಬಳ್ಳಿಗೆ ಒಂದು ವರ್ಷಕ್ಕೆ ಕೊಡಬೇಕಾದ ಪ್ರಮಾಣವಾಗಿದ್ದು ಮೊದಲನೆ ಕಂತನ್ನು ಜೂನ್ ತಿಂಗಳಿನಲ್ಲಿ ಎರಡನೆ ಕಂತಿನ ಗೊಬ್ಬರವನ್ನು ಆಗಸ್ಟ್ ತಿಂಗಳಿನಲ್ಲಿ ಕೊಡಬೇಕು. v ನೆಲದ ಮೇಲೆ ಹರಡಿರುವ ಹಾಗೂ ಹೆಚ್ಚಾದ ಕವಲು ಬಳ್ಳಿಗಳನ್ನು ಮುಂಗಾರಿಗೆ ಮುನ್ನ ಕತ್ತರಿಸಿ ತೆಗೆಯಬೇಕು. ಉಳಿದ ಬಳ್ಳಿಗಳನ್ನು ಆಶ್ರಯ ಮರಕ್ಕೆ ಕಟ್ಟಿ ಬೆಳೆಯಲು ಬೀಡÀಬೇಕು. ಕತ್ತರಿಸಿದ ಭಾಗಕ್ಕೆ ಕಾಪರ್ ಆಕ್ಸಿಕ್ಲೋರೈಡ್ ಪೇಸ್ಟ್ನಿಂದ ಲೇಪನ ಮಾಡಬೇಕು. v ಕಾಫಿ ಮತ್ತು ಅಡಿಕೆ ತೋಟಗಳಲ್ಲಿ ಒಂದಕ್ಕಿAತ ಹೆಚ್ಚು ತಳಿಗಳಿರುವಂತೆ ಕಾಳುಮೆಣಸು ಬಳ್ಳಿಗಳನ್ನು ನಾಟಿ ಮಾಡಬೇಕು. ಬಳ್ಳಿಯ ಗಾತ್ರ ಹೆಚ್ಚಿಸಲು ೫-೮ ಬಳ್ಳಿಗಳನ್ನು ನಾಟಿಮಾಡುವುದು v ಜಂತುಹುಳುಗಳ ಬಾಧೆಯನ್ನು ತಪ್ಪಿಸಲು (ನಿಧಾನ ಸೊರಗು ರೋಗ) ಮಳೆಗಾಲ ಪ್ರಾರಂಭವಾಗುವುದಕ್ಕಿAತ ಮುಂಚೆ ಪ್ರತೀ ಬಳ್ಳಿಗೆ ೧ ಕಿ. ಗ್ರಾಂ ಬೇವಿನ ಹಿಂಡಿ ಗಿಡದ ಬುಡಕ್ಕೆ ಹಾಕಬೇಕು.
ಭತ್ತ : vರೋಗ ರಹಿತ ಬಿತ್ತನೆ ಬೀಜಗಳನ್ನು ಮಾತ್ರ ನಾಟಿಗೆ ಉಪಯೋಗಿಸಬೇಕು ಮತ್ತು ಹೆಚ್ಚಿನ ಪ್ರಮಾಣದ ಕೊಟ್ಟಿಗೆ ಗೊಬ್ಬರ ಮತ್ತು ಹಸಿರೆಲೆ ಗೊಬ್ಬರವನ್ನು ಉಪಯೋಗಿಸಬೇಕು. v ಪ್ರತೀ ಕಿ.ಗ್ರಾಂ ಬಿತ್ತನೆ ಬೀಜಕ್ಕೆ ೪ ಗ್ರಾಂ ಕಾರ್ಬೆಂಡೆಜಿಮ್ (ಬ್ಯಾವಿಸ್ಟೀನ್) ಅಥವಾ ಕಾರ್ಬೆಂಡೆಜಿಮ್ + ಮ್ಯಾಂಕೋಜೆಬ್ (ಸಾ¥s಼ï ೨ ಗ್ರಾಂ) ಅಥವಾ ಟ್ರೆöÊಸೈಕ್ಲೋಜೊಲ್ (೨ ಗ್ರಾಂ) ಎಂಬ ಶಿಲೀಂಧ್ರನಾಶಕದಿAದ ಕಡ್ಡ್ದಾಯವಾಗಿ ಬೀಜೋಪಚಾರ ಮಾಡಿ ಬಿತ್ತನೆಗೆ ಉಪಯೋಗಿಸಬೇಕು. v ದೀರ್ಘಾವಧಿ ತಳಿಗಳ ನಾಟಿಯನ್ನು ಜುಲೈ ತಿಂಗಳ ಎರಡನೆ ವಾರದೊಳಗೆ ಕಡ್ಡಾಯವಾಗಿ ನಾಟಿ ಮಾಡಲೇಬೇಕು. ದೀರ್ಘಾವಧಿ ತಳಿಗಳನ್ನು ತಡವಾಗಿ ನಾಟಿಮಾಡಿದರೆ ಬೆಂಕಿ ರೋಗದ ಭಾದೆ ತೀವ್ರವಾಗುತ್ತದೆ. v ಸಸಿಯನ್ನು ನಾಟಿ ಮಾಡುವುದಕ್ಕಿಂತ ಮುಂಚಿತ ವಾಗಿ ಸಸಿ ಮಡಿಯ ಪೈರುಗಳ ತುದಿ ಭಾಗವನ್ನು ಕತ್ತರಿಸಿ ನಂತರ ನಾಟಿಗೆ ಉಪಯೋಗಿಸಬೇಕು. ಇದರಿಂದ ಕಾಂಡಕೊರೆಯುವ ಹುಳುವಿನ ಸಮಸ್ಯೆ ಯನ್ನು ಕಡಿಮೆ ಮಾಡಬಹುದು. v ನಾಟಿಗೆ ೨೧ ರಿಂದ ೨೮ ದಿನಗಳ ಸಸಿ ಗಳನ್ನೆ ಉಪಯೋಗಿಸಬೇಕು. v ಪ್ರತೀ ಮೂರು ಬೆಳೆಗೆ ಒಂದು ಸಾರಿಯಂತೆ ಎಕರೆಗೆ ೮ ಕೆ.ಜಿ. ಸತುವಿನ ಸಲ್ಫೇಟನ್ನು ೨೫ ಕೆ.ಜಿ ಮರಳಿನ ಜೊತೆಯಲ್ಲಿ ಮಿಶ್ರಣಮಾಡಿ ನಾಟಿ ಮಾಡುವ ಸಂದರ್ಭದಲ್ಲಿ ಮಣ್ಣಿಗೆ ಸೇರಿಸಬೇಕು ಮತ್ತು ೨.೦ ಕೆ.ಜಿ ಬೋರಾಕ್ಸ್ನ್ನು ೫ ಕೆ.ಜಿ ಕೊಟ್ಟಿಗೆ ಗೊಬ್ಬರದ ಜೊತೆಯಲ್ಲಿ ಮಿಶ್ರಣ ಮಾಡಿ ನಾಟಿಗೆ ಮುನ್ನ, ಇತರೆ ರಸಗೊಬ್ಬರಗಳ ಜೊತೆ ಬೆರೆಸದಂತೆ ಪ್ರತ್ಯೇಕವಾಗಿ ಮಣ್ಣಿಗೆ ಸೇರಿಸಿ. ಇದರಿಂದ ಭತ್ತದಲ್ಲಿ ಜಳ್ಳಿನ ಪ್ರಮಾಣ ಕಡಿಮೆಯಾಗುತ್ತದೆ.
ಅಡಿಕೆ : ಮಳೆಗಾಲ ಪ್ರಾರಂಭವಾಗುವುದಕ್ಕಿAತ ಮುಂಚಿತವಾಗಿ ತೋಟದಲ್ಲಿರುವ ರೋಗ ಪೀಡಿತ ಗೊಂಚಲು ಮತ್ತು ಅಡಿಕೆ ಕಾಯಿಗಳನ್ನು ಆರಿಸಿ ತೆಗೆದು ನಾಶಗೊಳಿಸಬೇಕು. vಕೊಳೆ ರೋಗವನ್ನು ಹತೋಟಿ ಮಾಡಲು ರೈತರು ಶೇ. ೧ ರ ಬೋರ್ಡೊ ದ್ರಾವಣವನ್ನು ಸರಿಯಾಗಿ ಮುಂಗಾರಿಗೆ ಮುನ್ನ ಕತ್ತರಿಸಿ ತೆಗೆಯಬೇಕು. ಉಳಿದ ಬಳ್ಳಿಗಳನ್ನು ಆಶ್ರಯ ಮರಕ್ಕೆ ಕಟ್ಟಿ ಬೆಳೆಯಲು ಬೀಡÀಬೇಕು. ಕತ್ತರಿಸಿದ ಭಾಗಕ್ಕೆ ಕಾಪರ್ ಆಕ್ಸಿಕ್ಲೋರೈಡ್ ಪೇಸ್ಟ್ನಿಂದ ಲೇಪನ ಮಾಡಬೇಕು. v ಕಾಫಿ ಮತ್ತು ಅಡಿಕೆ ತೋಟಗಳಲ್ಲಿ ಒಂದಕ್ಕಿAತ ಹೆಚ್ಚು ತಳಿಗಳಿರುವಂತೆ ಕಾಳುಮೆಣಸು ಬಳ್ಳಿಗಳನ್ನು ನಾಟಿ ಮಾಡಬೇಕು. ಬಳ್ಳಿಯ ಗಾತ್ರ ಹೆಚ್ಚಿಸಲು ೫-೮ ಬಳ್ಳಿಗಳನ್ನು ನಾಟಿಮಾಡುವುದು v ಜಂತುಹುಳುಗಳ ಬಾಧೆಯನ್ನು ತಪ್ಪಿಸಲು (ನಿಧಾನ ಸೊರಗು ರೋಗ) ಮಳೆಗಾಲ ಪ್ರಾರಂಭವಾಗುವುದಕ್ಕಿAತ ಮುಂಚೆ ಪ್ರತೀ ಬಳ್ಳಿಗೆ ೧ ಕಿ. ಗ್ರಾಂ ಬೇವಿನ ಹಿಂಡಿ ಗಿಡದ ಬುಡಕ್ಕೆ ಹಾಕಬೇಕು.
ಭತ್ತ : vರೋಗ ರಹಿತ ಬಿತ್ತನೆ ಬೀಜಗಳನ್ನು ಮಾತ್ರ ನಾಟಿಗೆ ಉಪಯೋಗಿಸಬೇಕು ಮತ್ತು ಹೆಚ್ಚಿನ ಪ್ರಮಾಣದ ಕೊಟ್ಟಿಗೆ ಗೊಬ್ಬರ ಮತ್ತು ಹಸಿರೆಲೆ ಗೊಬ್ಬರವನ್ನು ಉಪಯೋಗಿಸಬೇಕು. v ಪ್ರತೀ ಕಿ.ಗ್ರಾಂ ಬಿತ್ತನೆ ಬೀಜಕ್ಕೆ ೪ ಗ್ರಾಂ ಕಾರ್ಬೆಂಡೆಜಿಮ್ (ಬ್ಯಾವಿಸ್ಟೀನ್) ಅಥವಾ ಕಾರ್ಬೆಂಡೆಜಿಮ್ + ಮ್ಯಾಂಕೋಜೆಬ್ (ಸಾ¥s಼ï ೨ ಗ್ರಾಂ) ಅಥವಾ ಟ್ರೆöÊಸೈಕ್ಲೋಜೊಲ್ (೨ ಗ್ರಾಂ) ಎಂಬ ಶಿಲೀಂಧ್ರನಾಶಕದಿAದ ಕಡ್ಡ್ದಾಯವಾಗಿ ಬೀಜೋಪಚಾರ ಮಾಡಿ ಬಿತ್ತನೆಗೆ ಉಪಯೋಗಿಸಬೇಕು. v ದೀರ್ಘಾವಧಿ ತಳಿಗಳ ನಾಟಿಯನ್ನು ಜುಲೈ ತಿಂಗಳ ಎರಡನೆ ವಾರದೊಳಗೆ ಕಡ್ಡಾಯವಾಗಿ ನಾಟಿ ಮಾಡಲೇಬೇಕು. ದೀರ್ಘಾವಧಿ ತಳಿಗಳನ್ನು ತಡವಾಗಿ ನಾಟಿಮಾಡಿದರೆ ಬೆಂಕಿ ರೋಗದ ಭಾದೆ ತೀವ್ರವಾಗುತ್ತದೆ. v ಸಸಿಯನ್ನು ನಾಟಿ ಮಾಡುವುದಕ್ಕಿಂತ ಮುಂಚಿತ ವಾಗಿ ಸಸಿ ಮಡಿಯ ಪೈರುಗಳ ತುದಿ ಭಾಗವನ್ನು ಕತ್ತರಿಸಿ ನಂತರ ನಾಟಿಗೆ ಉಪಯೋಗಿಸಬೇಕು. ಇದರಿಂದ ಕಾಂಡಕೊರೆಯುವ ಹುಳುವಿನ ಸಮಸ್ಯೆ ಯನ್ನು ಕಡಿಮೆ ಮಾಡಬಹುದು. v ನಾಟಿಗೆ ೨೧ ರಿಂದ ೨೮ ದಿನಗಳ ಸಸಿ ಗಳನ್ನೆ ಉಪಯೋಗಿಸಬೇಕು. v ಪ್ರತೀ ಮೂರು ಬೆಳೆಗೆ ಒಂದು ಸಾರಿಯಂತೆ ಎಕರೆಗೆ ೮ ಕೆ.ಜಿ. ಸತುವಿನ ಸಲ್ಫೇಟನ್ನು ೨೫ ಕೆ.ಜಿ ಮರಳಿನ ಜೊತೆಯಲ್ಲಿ ಮಿಶ್ರಣಮಾಡಿ ನಾಟಿ ಮಾಡುವ ಸಂದರ್ಭದಲ್ಲಿ ಮಣ್ಣಿಗೆ ಸೇರಿಸಬೇಕು ಮತ್ತು ೨.೦ ಕೆ.ಜಿ ಬೋರಾಕ್ಸ್ನ್ನು ೫ ಕೆ.ಜಿ ಕೊಟ್ಟಿಗೆ ಗೊಬ್ಬರದ ಜೊತೆಯಲ್ಲಿ ಮಿಶ್ರಣ ಮಾಡಿ ನಾಟಿಗೆ ಮುನ್ನ, ಇತರೆ ರಸಗೊಬ್ಬರಗಳ ಜೊತೆ ಬೆರೆಸದಂತೆ ಪ್ರತ್ಯೇಕವಾಗಿ ಮಣ್ಣಿಗೆ ಸೇರಿಸಿ. ಇದರಿಂದ ಭತ್ತದಲ್ಲಿ ಜಳ್ಳಿನ ಪ್ರಮಾಣ ಕಡಿಮೆಯಾಗುತ್ತದೆ.
ಅಡಿಕೆ : ಮಳೆಗಾಲ ಪ್ರಾರಂಭವಾಗುವುದಕ್ಕಿAತ ಮುಂಚಿತವಾಗಿ ತೋಟದಲ್ಲಿರುವ ರೋಗ ಪೀಡಿತ ಗೊಂಚಲು ಮತ್ತು ಅಡಿಕೆ ಕಾಯಿಗಳನ್ನು ಆರಿಸಿ ತೆಗೆದು ನಾಶಗೊಳಿಸಬೇಕು. vಕೊಳೆ ರೋಗವನ್ನು ಹತೋಟಿ ಮಾಡಲು ರೈತರು ಶೇ. ೧ ರ ಬೋರ್ಡೊ ದ್ರಾವಣವನ್ನು ಸರಿಯಾಗಿ ತಯಾರಿಸಿ ಮೊದಲನೆ ಸಿಂಪರಣೆಯನ್ನು ಜೂನ್ ತಿಂಗಳ ಎರಡನೆ ವಾರ ದೊಳಗೆ ಕಡ್ಡಾಯವಾಗಿ ಸಿಂಪರಣೆ ಮಾಡಲೇಬೇಕು.vಬೋರ್ಡೊ ದ್ರಾವಣವನ್ನು ಸಿಂಪರಣೆ ಮಾಡುವಾಗ ಅಡಿಕೆಯ ಸುಳಿ, ಎಲೆ ಮತ್ತು ಗೊಂಚಲು ಸಂಪೂರ್ಣ ನೆನೆಯುವ ಹಾಗೆ ಸಿಂಪಡಿಸಬೇಕು. vನೀರು ನಿಲ್ಲದ ಹಾಗೆ ಬಸಿಗಾಲುವೆಗಳನ್ನು ನಿರ್ಮಿಸಬೇಕು. vಅಡಿಕೆ ಕಾಯಿ ಹೊಡೆದು ಬೀಳುವ /ಸೀಳುವ ಸಮಸ್ಯೆ ಇದ್ದಲ್ಲಿ ಪ್ರತಿ ಅಡಿಕೆ ಗಿಡಕ್ಕೆ ೨೫ ರಿಂದ ೩೦ ಗ್ರಾಂ ಬೋರಾಕ್ಸ್ನ್ನು ಕೊಡಬೇಕು. v ಪ್ರತಿ ಮರವೊಂದಕ್ಕೆ ವರ್ಷಕ್ಕೆ ೨೦ ಕಿ. ಗ್ರಾಂ ನಂತೆ ಕೊಟ್ಟಿಗೆ ಗೊಭ್ಬರ ಹಾಗೂ ಹಸಿರೆಲೆ ಗೊಬ್ಬರವನ್ನು ಕೊಡಬೇಕು. v ಪ್ರತಿ ಗಿಡಕ್ಕೆ ೨೨೦ ಗ್ರಾಂ ಯೂರಿಯಾ, ೨೦೦ ಗ್ರಾಂ ಶಿಲಾರಂಜಕ ಮತ್ತು ೨೩೦ ಗ್ರಾಂ ಎಂ.ಓ.ಪಿನ್ನು ಕೊಡಬೇಕು.ಮೇಲೆ ತಿಳಿಸಿರುವ ಪ್ರಮಾಣದ ಗೊಬ್ಬರವು ಒಂದು ಗಿಡಕ್ಕೆ ಒಂದು ವರ್ಷಕ್ಕೆ ಕೊಡಬೇಕಾದ ಪ್ರಮಾಣವಾಗಿದ್ದು ಮೊದಲನೆ ಕಂತನ್ನು ಜೂನ್ ತಿಂಗಳಿನಲ್ಲಿ ಎರಡನೆ ಕಂತಿನ ಗೊಬ್ಬರವನ್ನು ಆಗಸ್ಟ್ ತಿಂಗಳಿನಲ್ಲಿ ಕೊಡಬೇಕು. v ಪ್ರತಿ ಅಡಿಕೆಯ ಬುಡದ ಭಾಗಕ್ಕೆ ೩ ರಿಂದ ೫ ಲೀಟರ್ ಕಾಪರ್ ಆಕ್ಸಿಕ್ಲೋರೈಡ್ (ಬ್ಯಾರಲ್ಗೆ ೫೦೦ ಗ್ರಾಂ) ದ್ರಾವಣವನ್ನು ಸುರಿಯಬೇಕು.
ಶುಂಠಿ : ನೀರು ನಿಲ್ಲದ ಹಾಗೆ ಬಸಿಗಾಲುವೆಗಳನ್ನು ನಿರ್ಮಿಸಬೇಕು. v ಪ್ರತೀ ಶುಂಠಿಯ ಗಿಡದ ಬುಡದ ಭಾಗಕ್ಕೆ ೫೦ ರಿಂದ ೬೦ ಗ್ರಾಂ ಟ್ರೆöÊಕೋಡರ್ಮ ಎಂಬ ಜೈವಿಕ ಶಿಲೀಂಧ್ರವನ್ನು ೧ ಕೆ.ಜಿ ಬೇವಿನ ಹಿಂಡಿ ಅಥವಾ ೫ ಕೆ.ಜಿ ಕೊಟ್ಟಿಗೆ ಗೊಬ್ಬರದಲ್ಲ್ಲಿ ಮಿಶ್ರಣ ಮಾಡಿ ಬುಡಕ್ಕೆ ಹಾಕಬೇಕು. v ಗೆಡ್ಡೆಕೊಳೆ ರೋಗವನ್ನು ಹತೋಟಿ ಮಾಡಲು ಶೇ. ೧ ರ ಬೋರ್ಡೊ ದ್ರಾವಣವನ್ನು ಸಿಂಪರಣೆ ಮಾಡಲೇಬೇಕು. v ಪ್ರತಿ ಶುಂಠಿಯ ಗಿಡದ ಬುಡದ ಭಾಗಕ್ಕೆ ೧ ರಿಂದ ೨ ಲೀಟರ್ ಕಾಪರ್ ಆಕ್ಸಿಕ್ಲೋರೈಡ್ (೨೦೦ ಲೀಟರ್ ಬ್ಯಾರಲ್ಗೆ ೫೦೦ ಗ್ರಾಂ) ದ್ರಾವಣವನ್ನು ಸುರಿಯಬೇಕು. vಈಗಾಗಲೆ ಶುಂಠಿಯನ್ನು ನಾಟಿ ಮಾಡಿರುವ ಪ್ರದೇಶದಲ್ಲಿ ಎಲೆ ಚುಕ್ಕೆ ರೋಗ ಕಂಡು ಬಂದಿದ್ದರೆ ಅದರ ಹತೋಟಿಗೆ ಕಾರ್ಬೈಂಡೆಜಿಮ್ + ಮ್ಯಾಂಕೋಜೆಬ್ (ಸಾ¥s಼ï. ಕಂಪಾನಿಯನ್, ಸ್ಪೀಂಟ್) ೨ ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಪ್ರಧಾನ ವಿಜ್ಞಾನಿ ಮತ್ತು ಮುಖ್ಯಸ್ಥರು, ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ, ಗೋಣಿಕೊಪ್ಪಲು, ಕೊಡಗು ಜಿಲ್ಲೆ, ದೂರವಾಣಿ: ೦೮೨೭೪-೨೪೭೨೭೪ ಇವರನ್ನು ಸಂಪರ್ಕಿಸಬಹುದಾಗಿದೆ.
-ಡಾ|| ವೀರೇಂದ್ರ ಕುಮಾರ್, ಸಸ್ಯ ಸಂರಕ್ಷಣಾತಜ್ಞ
ಕೃಷಿ ವಿಜ್ಞಾನ ಕೇಂದ್ರ, ಗೋಣಿಕೊಪ್ಪಲು.