ಮಡಿಕೇರಿ, ಜೂ. ೯: ಸೋಮವಾರಪೇಟೆ ತಾಲೂಕಿನ ಕುಶಾಲನಗರ, ಕೂಡಿಗೆ, ಹೆಬ್ಬಾಲೆ, ತೊರೆನೂರು, ಶಿರಂಗಾಲ, ಮುಳ್ಳುಸೋಗೆ, ಗುಡ್ಡೆಹೊಸೂರು, ಕೂಡುಮಂಗಳೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್-೧೯ ತಡೆ ಸಂಬAಧಿಸಿದAತೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ಅಧ್ಯಕ್ಷತೆಯಲ್ಲಿ ಟಾಸ್ಕ್ಫೋರ್ಸ್ ಸಮಿತಿ ಸಭೆ ನಡೆಯಿತು.

ಶಾಸಕರು ಕೋವಿಡ್-೧೯ ತಡೆಯಲು ಅನುಸರಿಸಬೇಕಾದ ಕ್ರಮದ ಬಗ್ಗೆ ಮಾರ್ಗದರ್ಶನ ನೀಡಿದರು. ಇಲ್ಲಿಯವರೆಗೆ ಮಡಿಕೇರಿ ಮತ್ತು ಸೋಮವಾರಪೇಟೆ ತಾಲೂಕಿನ ೪೨ ಗ್ರಾಮ ಪಂಚಾಯಿತಿಗಳಲ್ಲಿ ಟಾಸ್ಕ್ಫೋರ್ಸ್ ಸಮಿತಿ ಸಭೆ ನಡೆಸಲಾಗಿದೆ.

ತಹಶೀಲ್ದಾರ್ ಗೋವಿಂದರಾಜು, ತಾ.ಪಂ. ಇಒ, ಆರೋಗ್ಯ ಇಲಾಖಾಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರನ್ನೊಳಗೊಂಡ ಟಾಸ್ಕ್ಫೋರ್ಸ್ ಸಮಿತಿಯ ಸದಸ್ಯರು ಹಾಜರಿದ್ದರು.

ಆಹಾರ ಕಿಟ್ ವಿತರಣೆ: ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕೂಡುಮಂಗಳೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರಿಗೆ ಆಹಾರದ ಕಿಟ್ ವಿತರಿಸಿದರು. ಕೋವಿಡ್-೧೯ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸಮರ ಸೈನಿಕರಂತೆ ಮನೆ ಮನೆಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಕಾರ್ಯವೈಖರಿಯನ್ನೂ ಶಾಸಕ ರಂಜನ್ ಶ್ಲಾಘಿಸಿದರು.