ಕೂಡಿಗೆ, ಜೂ. ೧೦: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿ ಕಸ ವಿಲೇವಾರಿ ಘಟಕವನ್ನು ಪ್ರಾರಂಭ ಮಾಡುವ ಬಗ್ಗೆ ಬ್ಯಾಡಗೊಟ್ಟ ಗ್ರಾಮಸ್ಥರು ಮತ್ತು ದಿಡ್ಡಳ್ಳಿ ಪುನರ್ವಸತಿ ಕೇಂದ್ರದ ಗ್ರಾಮಸ್ಥರು ಬೇಲಿ ನಿರ್ಮಾಣಕ್ಕೆ ತಡೆ ಮಾಡಿದಾಗ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಶಿವಶಂಕರ್ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ನಡುವೆ ತಂತಿ ಬೇಲಿ ನಿರ್ಮಾಣ ಕಾರ್ಯ ನಡೆಯಿತು.
ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಘಟಕದ ಪ್ರಸ್ತಾವನೆಯು ೨೦೧೭-೧೮ ಸಾಲಿನಿಂದ ಇದ್ದು ಇದುವರೆಗೂ ಅನೇಕ ಕಾರಣಗಳಿಂದ ಸ್ಥಗಿತಗೊಂಡಿತ್ತು.
ಜಿಲ್ಲಾಧಿಕಾರಿಗಳ ಆದೇಶದಂತೆ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಸ ವಿಲೇವಾರಿ ಘಟಕವನ್ನು ಪ್ರಾರಂಭಿಸಿ ಶುಚಿತ್ವದ ಕಡೆಗೆ ಹೆಚ್ಚು ಗಮನಹರಿಸಲು ಸೂಚನೆ ನೀಡಿದ್ದರು. ಅದರಂತೆ ಕಂದಾಯ ಇಲಾಖೆಯ ವತಿಯಿಂದ ಬ್ಯಾಡಗೊಟ್ಟ ಗ್ರಾಮದಲ್ಲಿರುವ ಸರ್ವೆ ನಂಬರ್ ೧೧ರಲ್ಲಿ ಒಂದು ಎಕರೆ ಜಾಗವನ್ನು ಗುರುತಿಸಲಾಗಿತ್ತು. ಅದರನ್ವಯ ಗ್ರಾಮ ಪಂಚಾಯಿತಿ ಮಾಸಿಕ ಸಭೆಯಲ್ಲಿ ಬ್ಯಾಡಗೊಟ್ಟ ಗ್ರಾಮದಲ್ಲಿ ದಿಡ್ಡಳ್ಳಿ ಪುನರ್ವಸತಿ ಕೇಂದ್ರದಿAದ ಬಹು ದೂರದ ಜಾಗದಲ್ಲಿ ಒಣ ಕಸ ವಿಲೇವಾರಿ ಘಟಕವನ್ನು ಪ್ರಾರಂಭ ಮಾಡಲು ತೀರ್ಮಾನಿಸಲಾಯಿತು. ಅದರಂತೆ ಜಿಲ್ಲಾಧಿಕಾರಿಗಳ ಆದೇಶ ಮತ್ತು ಗ್ರಾಮ ಪಂಚಾಯಿತಿ ತೀರ್ಮಾನದಂತೆ ಇಂದು ಕಸ ವಿಲೇವಾರಿ ಘಟಕದ ಜಾಗಕ್ಕೆ ಬೇಲಿ ನಿರ್ಮಾಣ ಕಾರ್ಯಕ್ಕೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಮುಂದಾಗಿತ್ತು. ಆ ಸಂದರ್ಭದಲ್ಲಿ ಗ್ರಾಮಸ್ಥರಿಗೂ ಮತ್ತು ಅಭಿವೃದ್ಧಿ ಅಧಿಕಾರಿ ಅಯಿಷಾ ಮತ್ತು ಸದಸ್ಯ ಟಿ.ಪಿ. ಹಮೀದ್ ನಡುವೆ ಮಾತಿನ ಚಕಮಕಿ ನಡೆಯಿತು.
ಒಣಕಸ ವಿಲೇವಾರಿ ಘಟಕದ ಜಾಗಕ್ಕೆ ಬೇಲಿ ನಿರ್ಮಾಣ ಮಾಡುವ ಕಾರ್ಯ ಪ್ರಾರಂಭ ಮಾಡುವಾಗ ಬ್ಯಾಡಗೊಟ್ಟ ಗ್ರಾಮಸ್ಥರು ಮತ್ತು ದಿಡ್ಡಳ್ಳಿ ಪುನರ್ವಸತಿ ಕೇಂದ್ರದ ನಿವಾಸಿಗಳು ಉದ್ದೇಶಿತ ಯೋಜನೆಯಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸಿಸುವ ಗ್ರಾಮಸ್ಥರಿಗೆ ಬಾರಿ ತೊಂದರೆಯಾಗುತ್ತದೆ. ಅಗುತ್ತªದೆ. ದುರ್ನಾತ ಬೀರುತ್ತದೆ. ಯೋಜನೆಯನ್ನು ಬದಲಿ ಜಾಗದಲ್ಲಿ ನಿರ್ಮಾಣ ಮಾಡಿ ಎಂದು ಗ್ರಾಮಸ್ಥರು ತಡೆಯಲು ಮುಂದಾದಾಗ ಪೊಲೀಸರು ಮಧ್ಯ ಪ್ರವೇಶಿಸಿ ಜಿಲ್ಲಾಧಿಕಾರಿ ಆದೇಶದಂತೆ ಗ್ರಾಮ ಪಂಚಾಯಿತಿರವರು ಒಣಕಸ ವಿಲೇವಾರಿ ಘಟಕದ ಜಾಗಕ್ಕೆ ಬೇಲಿ ಹಾಕಲು ಮುಂದಾದರು. ಇದಕ್ಕೆ ಯಾರು ತಡೆಯಬಾರದು ಎಂದು ಜಾಗದಲ್ಲಿದ್ದ ಗ್ರಾಮಸ್ಥರನ್ನು ಹೊರಗೆ ಕಳುಹಿಸಲಾಯಿತು.
ಈ ವಿಷಯಕ್ಕೆ ಸಂಬAಧಿಸಿದAತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಯಿಷಾ ಅವರ ಪ್ರತಿಕ್ರಿಯೆ ಬಯಸಿದಾಗ ಕಳೆದ ಮೂರು ವರ್ಷಗಳ ಹಿಂದೆ ಕಸ ವಿಲೇವಾರಿ ಘಟಕದ ಜಾಗವನ್ನು ಗುರುತಿಸಲಾಗಿತ್ತು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಘಟಕವನ್ನು ತೆರೆಯುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಆದೇಶದಂತೆ ಒಣಕಸ ವಿಲೇವಾರಿ ಮಾಡಲು ತೀರ್ಮಾನಿಸಲಾಯಿತು. ಅದರಂತೆ ಕಾರ್ಯೋನ್ಮುಖರಾಗಿದ್ದೇವೆ ಎಂದರು.
ಈ ಸಂದರ್ಭ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಶಿವಶಂಕರ್, ಸಹಾಯಕ ಠಾಣಾಧಿಕಾರಿ ಸ್ವಾಮಿ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್, ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ, ಸದಸ್ಯರಾದ ಅನಂತ, ಕೆ.ಎಸ್. ಶಿವಕುಮಾರ್, ರತ್ನಮ್ಮ, ಹೆಚ್.ಎಸ್. ರವಿ, ಜಯಶ್ರೀ, ಎಂ.ಎಸ್. ಜಯಶೀಲಾ, ಪಲ್ಲವಿ, ಲಕ್ಷಿö್ಮ ಸೇರಿದಂತೆ ಸಿಬ್ಬಂದಿ ವರ್ಗದವರು ಇದ್ದರು.
-ಕೆ.ಕೆ. ನಾಗರಾಜಶೆಟ್ಟಿ.