ಮಡಿಕೇರಿ, ಜೂ.೧೦: ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ೧೧ ಗಂಟೆ ವೇಳೆಗೆ ೨೩೫ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೧೭೦ ಆರ್.ಟಿ.ಪಿ.ಸಿ.ಆರ್. ಮತ್ತು ೬೫ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಮಡಿಕೇರಿ ತಾಲೂಕಿನಲ್ಲಿ ೪೨ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೩೭ ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು ೫ ಪ್ರಕರಣ ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಸೋಮವಾರಪೇಟೆ ತಾಲೂಕಿನಲ್ಲಿ ೧೦೫ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೬೧ ಆರ್.ಟಿ.ಪಿ.ಸಿ.ಆರ್ ಮತ್ತು ೪೪ ಪ್ರಕರಣಗಳು ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ವೀರಾಜಪೇಟೆ ತಾಲೂಕಿನಲ್ಲಿ ೮೮ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೭೨ ಆರ್.ಟಿ.ಪಿ.ಸಿ.ಆರ್ ಮತ್ತು ೧೬ ಪ್ರಕರಣ ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೨೬,೭೫೬ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧೧೩ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೨೪,೩೧೪ ಮಂದಿ ಗುಣಮುಖರಾಗಿದ್ದಾರೆ. ೨೧೦೦ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧ ಸಾವು ಉಂಟಾಗಿದ್ದು, ಒಟ್ಟು ೩೪೨ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೨೬೧ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.೯.೮ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.