ಶನಿವಾರಸಂತೆ, ಜೂ. ೧೧: ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣ ಅಧಿಕಗೊಳ್ಳುತ್ತಿದ್ದು, ಅಧಿಕಾರಿಗಳು, ಪಂಚಾಯಿತಿ ಸದಸ್ಯರು ಹಲವಾರು ಕ್ರಮಗಳನ್ನು ಕೈಗೊಂಡು ಗ್ರಾಮಸ್ಥರಲ್ಲಿ ಧೈರ್ಯ ತುಂಬಿ ಜಾಗೃತಿ ಮೂಡಿಸುತ್ತಿದ್ದಾರೆ.

ಗ್ರಾಮಗಳಲ್ಲಿ ಕಂಟೈನ್‌ಮೆAಟ್ ವಲಯದಲ್ಲಿರುವ ಕೊರೊನಾ ಸೋಂಕಿತರನ್ನು ಭೇಟಿ ಮಾಡಿದ ನೋಡಲ್ ಅಧಿಕಾರಿ ಬಾಲಕೃಷ್ಣ ರೈ, ಸೋಂಕಿತರು ಕಡ್ಡಾಯವಾಗಿ ಮನೆಯಲ್ಲೇ ಇದ್ದು, ವೈದ್ಯರ ಸಲಹೆಯಂತೆ ಔಷಧೋಪಚಾರ ಮಾಡಿಕೊಂಡು ಗುಣಮುಖ ರಾಗಬೇಕು ಎಂದು ಸಲಹೆ ನೀಡಿದರು. ಕಂದಾಯ ಪರಿವೀಕ್ಷಕ ಮಂಜುನಾಥ್, ಗ್ರಾಮ ಲೆಕ್ಕಾಧಿಕಾರಿ ಕೆ.ಎಸ್. ಸಂತೋಷ್, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು.