ಮಡಿಕೇರಿ, ಜೂ. ೧೧: ಮಾನಸಿಕ ಅಸ್ವಸ್ಥನ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಹಲ್ಲೆಗೊಳಗಾದ ವ್ಯಕ್ತಿ ಚಿಂತಾಜನಕ ಸ್ಥಿತಿಯಲ್ಲಿ ಅಶ್ವಿನಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದು, ವ್ಯಕ್ತಿ ಜೀವನ್ಮರಣ ಸ್ಥಿತಿಯಲ್ಲಿದ್ದಾರೆ.

ವೀರಾಜಪೇಟೆ ಚಿಕ್ಕಪೇಟೆಯ ನಿವಾಸಿ ರಾಯ್ ಡಿಸೋಜಾ (೫೦) ಪೊಲೀಸರಿಂದ ಹಲ್ಲೆಗೊಳಗಾದ ವ್ಯಕ್ತಿ.

ರಾಯ್ ಡಿಸೋಜಾ ಮೂರ್ಚೆ ರೋಗದಿಂದ ಬಳಲುತ್ತಿದ್ದು, ಮಾನಸಿಕ ಅಸ್ವಸ್ಥರಾಗಿದ್ದಾರೆ. ತಾ. ೯ ರಂದು ರಾಯ್ ಮನೆಯಿಂದ ರಾತ್ರಿ ೧೨ ಗಂಟೆಗೆ ಕತ್ತಿ ಹಿಡಿದು ಓಡಿದ್ದಾರೆ. ನಂತರ ರಸ್ತೆ ಮಧ್ಯೆ ಇದ್ದ ಪೊಲೀಸರು ತಡೆದಾಗ ಮಾನಸಿಕ ಅಸ್ವಸ್ಥ ರಾಯ್ ಪೊಲೀಸರಿಗೆ ಕತ್ತಿ ಬೀಸಿದ್ದಾರೆ ಎನ್ನಲಾಗಿದೆ. ಬಳಿಕ ಪೊಲೀಸರು ವೀರಾಜಪೇಟೆ ನಗರ ಠಾಣೆಗೆ ಕರೆದೊಯ್ದು ರಾಯ್ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದಾಗಿ ರಾಯ್ ಅವರ ಮುಖ ಹಾಗೂ ಕಣ್ಣಿನ ಭಾಗಕ್ಕೆ ಪೆಟ್ಟಾಗಿದ್ದು, ಕಣ್ಣಿಗೆ ಬ್ಯಾಂಡೇಜ್ ಹಾಕಲಾಗಿದೆ. ದೇಹದ ಇತರ ಭಾಗಗಳಿಗೂ ಗಂಭೀರ ಪೆಟ್ಟು ಬಿದ್ದಿದೆ ಎಂದು ಸಂಬAಧಿಕರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೊಡಗು ಜಿಲ್ಲಾ ಕ್ರೆöÊಸ್ತ ಸೇವಾ ಸಂಘದ ಅಧ್ಯಕ್ಷ ಬೇಬಿ ಮ್ಯಾಥ್ಯೂ ಹಾಗೂ ಕ್ಯಾಥೋಲಿಕ್ ಅಸೋಸಿಯೇಷನ್ ಉಪಾಧ್ಯಕ್ಷ, ಕೆ. ನಿಡುಗಣೆ ಗ್ರಾ.ಪಂ. ಸದಸ್ಯ ಜಾನ್ಸನ್ ಪಿಂಟೋ ಘಟನೆಯನ್ನು ಖಂಡಿಸಿದ್ದು, ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ. ತಪ್ಪು ಮಾಡಿದ್ದಾರೆ ಎಂದಾದರೆ ಕಾನೂನಿನ ಪ್ರಕಾರ ವಿಚಾರಣೆ ನಡೆಸಬೇಕಿತ್ತು. ಹಲ್ಲೆ ಮಾಡಿದಲ್ಲದೆ, ಗಾಯಾಳುವಿಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಆಸ್ಪತ್ರೆಗೆ ದಾಖಲಿಸಬೇಕಾಗಿತ್ತು.

(ಮೊದಲ ಪುಟದಿಂದ) ಮಾನವೀಯತೆ ಇಲ್ಲದೆ ಈ ರೀತಿಯ ದೌರ್ಜನ್ಯವೆಸಗಿರುವದು ಖಂಡನಾರ್ಹ ಎಂದು ‘ಶಕ್ತಿ’ಗೆ ತಿಳಿಸಿದ್ದಾರೆ. ರಾತ್ರಿ ೩ ಗಂಟೆ ವೇಳೆಯಲ್ಲಿ ಪೊಲೀಸರು ರಾಯ್ ಮನೆಗೆ ತೆರಳಿ ಆತನ ಅಮ್ಮನನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಮಗನನ್ನು ಅವರಿಗೆ ಒಪ್ಪಿಸಿದ್ದಾರೆ ಎಂದು ರಾಯ್ ಸಹೋದರ ರಾಬಿನ್ ಡಿಸೋಜಾ ಆರೋಪಿಸಿದ್ದಾರೆ. ನಂತರ ಆರೋಗ್ಯದಲ್ಲಿ ಏರುಪೇರು ಉಂಟಾದಾಗ ವೀರಾಜಪೇಟೆ ಆಸ್ಪತ್ರೆಗೆ ಸೇರಿಸಿದಾಗ ಅಲ್ಲಿನ ವೈದ್ಯರು ವ್ಯಕ್ತಿಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಮಡಿಕೇರಿಗೆ ರವಾನಿಸುವಂತೆ ತಿಳಿಸಿದ್ದಾರೆ.

ಬಳಿಕ ಮಡಿಕೇರಿಯ ಅಶ್ವಿನಿ ಆಸ್ಪತ್ರೆಗೆ ದಾಖಲಿಸಲಾಯಿತು. ವೆಂಟಿಲೇಟರ್ ನಲ್ಲಿ ಕೃತಕ ಉಸಿರಾಟದಲ್ಲಿರುವ ರಾಯ್ ಜೀವನ್ಮರಣ ಸ್ಥಿತಿಯಲ್ಲಿದ್ದಾರೆಂದು ಕುಟುಂಬಸ್ಥರು ತಿಳಿಸಿದ್ದಾರೆ. ಅವಿವಾಹಿತರಾಗಿರುವ ರಾಯ್ ಚಿಕಿತ್ಸೆಗೆ ಎಷ್ಟು ವೆಚ್ಚ ತಗುಲಿದರೂ ಅದನ್ನು ನಾವು ಭರಿಸುತ್ತೇವೆ ಎಂದು ಕೆಲ ಪೊಲೀಸರು ಕರೆ ಮಾಡಿ ಕುಟುಂಬಸ್ಥರಿಗೆ ಹೇಳುತ್ತಿದ್ದಾರೆ; ಅದಲ್ಲದೆ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಸಹೋದರ ರಾಬಿನ್ ಆರೋಪಿಸಿದ್ದಾರೆ.

ಘಟನೆಗೆ ಸಂಬAಧಿಸಿದAತೆ ತಾ. ೧೨ ರಂದು (ಇಂದು) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಹಲ್ಲೆಗೊಳಗಾದ ರಾಯ್ ಸಹೋದರ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೂರು ಸಲ್ಲಿಸಲಿದ್ದಾರೆ.

ನಿಷ್ಪಕ್ಷಪಾತ ತನಿಖೆ

ಈ ಘಟನೆಯ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಅವರ ಗಮನಕ್ಕೆ ತಂದಾಗ ತನಗೆ ಈ ಕುರಿತು ಸಂಬAಧಿಸಿದವರು ದೂರು ನೀಡಿದರೆ ತಕ್ಷಣವೇ ನಿಷ್ಪಕ್ಷಪಾತವಾದ ತನಿಖೆ ನಡೆಸಿ ಯಾರೇ ತಪ್ಪು ಮಾಡಿದ್ದರೂ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಪೊಲೀಸ್ ಮೇಲೆ ಹಲ್ಲೆ ಆರೋಪ, ಎಫ್‌ಐಆರ್ ದಾಖಲು

ಮಾನಸಿಕ ಅಸ್ವಸ್ಥ ವ್ಯಕ್ತಿ ತಾ.೯ ರಂದು ತನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ವೀರಾಜಪೇಟೆ ನಗರ ಪೊಲೀಸ್ ಪೇದೆ ಸಂಗಮೇಶ್ ದೂರು ಸಲ್ಲಿಸಿದ್ದು, ವೀರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾತ್ರಿ ೧೧.೩೦ ರ ಸಮಯದಲ್ಲಿ ವಸತಿ ಗೃಹದಿಂದ ಊಟ ಮುಗಿಸಿ ಕರ್ತವ್ಯಕ್ಕೆ ತೆರಳುವ ಸಂದರ್ಭ ಬೈಕ್ ಅಡ್ಡಗಟ್ಟಿ ವ್ಯಕ್ತಿ ಕತ್ತಿಯಿಂದ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಇದನ್ನು ತಪ್ಪಿಸಿಕೊಳ್ಳುವ ಸಂದರ್ಭ ಎಡಗೈಗೆ ಗಾಯವಾಗಿದೆ. ಹಲ್ಲೆ ಮಾಡಿದ ವ್ಯಕ್ತಿ ಮಾನಸಿಕ ಅಸ್ವಸ್ಥನ ರೀತಿ ವರ್ತಿಸಿದ ಹಿನ್ನೆಲೆ ದೂರು ನೀಡದೆ, ಗಾಯವಾದ ಕಾರಣ ವಿಶ್ರಾಂತಿಗೆ ತೆರಳಿದೆ. ಕೈನೋವು ಜಾಸ್ತಿಯಾದ ಹಿನ್ನೆಲೆ ಮರುದಿನ ದೂರು ಸಲ್ಲಿಸಲಾಗಿದೆ ಎಂದು ಎಫ್ ಐ ಆರ್ ನಲ್ಲಿ ಉಲ್ಲೇಖಿಸಲಾಗಿದೆ.

ಡಿವೈಎಸ್ಪಿ ಹೇಳಿಕೆ

ವೀರಾಜಪೇಟೆ ಡಿವೈಎಸ್ಪಿ ಜಯಕುಮಾರ್ ಘಟನೆ ಕುರಿತು ಪ್ರತಿಕ್ರಿಯಿಸಿದ್ದು, ಈ ಸಂಬAಧ ಯಾರೂ ದೂರು ಸಲ್ಲಿಸಿಲ್ಲ. ಬೆಂಗಳೂರಿನಿAದ ಬಂದ ಸಹೋದರ ಈ ಬಗ್ಗೆ ಮಾತನಾಡುತ್ತಿದ್ದಾರೆ. ದೂರು ನೀಡಿದರೆ ತನಿಖೆ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.