ಮಡಿಕೇರಿ, ಜೂ. ೧೦: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಸೇರಿದಂತೆ ಕೆಲವು ಕಡೆಗಳಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಇಂತಹ ಪ್ರದೇಶದ ಗ್ರಾಮಗಳ ಮನೆ ಮನೆಗೆ ತೆರಳಿ ರ‍್ಯಾಪಿಡ್ ಆಂಟಿಜನ್ ಪರೀಕ್ಷೆ ಮಾಡಿ ಸೋಂಕಿತ ಪ್ರಕರಣಗಳನ್ನು ನಿಯಂತ್ರಣಕ್ಕೆ ತರುವಂತೆ ತಹಶೀಲ್ದಾರರು ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ನಿರ್ದೇಶನ ನೀಡಿದ್ದಾರೆ.

ತಹಶೀಲ್ದಾರರು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳ ಜೊತೆ ವೀಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಸೋಂಕಿತರನ್ನು ಅನವಶ್ಯಕವಾಗಿ ಗೃಹ ಸಂಪರ್ಕ ತಡೆಯಲ್ಲಿರಿಸದೆ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಬೇಕು. ಇದರಿಂದ ಸೋಂಕಿತ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಬಹುದು, ಸಂಚಾರಿ ಆರೋಗ್ಯ ತಂಡ ಸರಿಯಾಗಿ ಕೆಲಸ ಮಾಡಿದರೆ ಗ್ರಾಮ ಮಟ್ಟದಲ್ಲಿ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಬಹುದಾಗಿದೆ. ರ‍್ಯಾಟ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಬೇಕು.

ಕೋವಿಡ್-೧೯ ಪ್ರಕರಣ ಸಂಬAಧಿಸಿದAತೆ ಸೋಮವಾರಪೇಟೆ ತಾಲೂಕಿನಲ್ಲಿ ಕೆಲವು ಗ್ರಾಮಗಳನ್ನು ಹಾಟ್‌ಸ್ಪಾಟ್ ಪ್ರದೇಶವೆಂದು ಗುರುತಿಸಲಾಗಿದೆ. ಈ ಗ್ರಾಮಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಾಗಿ ಮಾಡಬೇಕು. ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರು ಕೋವಿಡ್ ಪರೀಕ್ಷೆ ಹೆಚ್ಚು ಮಾಡಬೇಕು. ಗ್ರಾಮಗಳಲ್ಲಿ ಕೋವಿಡ್ ಸೋಂಕಿತ ಪ್ರಕರಣ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಯತ್ನ ಮಾಡಬೇಕು ಎಂದು ಹೇಳಿದರು. ಕೋವಿಡ್ ೧೯ ನಿಯಂತ್ರಣ ಸಂಬAಧಿಸಿದAತೆ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಹಲವು ಮಾಹಿತಿ ನೀಡಿದರು.

ಎಚ್ಚರ ವಹಿಸಬೇಕು

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಕೊಡಗು ಜಿಲ್ಲೆಯಲ್ಲಿ ಇದೇ ಜೂನ್ ೧೨ ಮತ್ತು ೧೩ ರಂದು ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಹಿನ್ನೆಲೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಎಲ್ಲರೂ ಎಚ್ಚರ ವಹಿಸಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಮಾತನಾಡಿ ಪ್ರಾಕೃತಿಕ ವಿಕೋಪ ಸಂಬAಧಿಸಿದAತೆ ಜಿಲ್ಲೆಯಲ್ಲಿ ೫೧ ಗ್ರಾ.ಪಂ.ಗಳ ೭೨ ಗ್ರಾಮಗಳನ್ನು ಸೂಕ್ಷö್ಮ ಪ್ರದೇಶವೆಂದು ಗುರುತಿಸಲಾಗಿದೆ. ೫೭ ಗ್ರಾಮಗಳನ್ನು ಪ್ರವಾಹ ಪೀಡಿತ ಮತ್ತು ೨೩ ಪ್ರದೇಶಗಳನ್ನು ಭೂಕುಸಿತ ಸಂಭವಿಸಬಹುದಾದ ಸೂಕ್ಷö್ಮ ಪ್ರದೇಶವೆಂದು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯ ೧೮ ಕಡೆಗಳಲ್ಲಿ ತಾತ್ಕಾಲಿಕ ಗೋಶಾಲೆ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರಿಹಾರ ಕೇಂದ್ರಗಳಲ್ಲಿ ಕನಿಷ್ಟ ಮೂಲಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಗಮನಹರಿಸಲಾಗಿದೆ. ಶುದ್ಧ ಕುಡಿಯುವ ನೀರು ಪೂರೈಕೆ, ಶೌಚಾಲಯ, ವೈದ್ಯಕೀಯ ಕಿಟ್, ವೈಯಕ್ತಿಕ ಸ್ವಚ್ಛತೆ ಹೀಗೆ ಹಲವು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರು ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ ೫೦ ಸಾವಿರ ರೂ ಬಿಡುಗಡೆ ಮಾಡಲಾಗಿದ್ದು, ಅಗತ್ಯ ಮುನ್ನೆಚ್ಚರ ವಹಿಸಬೇಕು. ನೋಡಲ್ ಅಧಿಕಾರಿಗಳು ಆಗಾಗ ವಿವಿಧೆಡೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಹೇಳಿದರು.

ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ಜಿಪಂ.ಉಪ ಕಾರ್ಯದರ್ಶಿ ಲಕ್ಷಿö್ಮ, ತಹಶೀಲ್ದಾರ್ ಮಹೇಶ್, ನೋಡಲ್ ಅಧಿಕಾರಿಗಳಾದ ಪಿ.ಶ್ರೀನಿವಾಸ್, ಶಶಿಧರ್, ಶ್ರೀಕಂಠಯ್ಯ, ಲಿಂಗರಾಜು, ಶೇಖರ್, ಡಾ.ಆನಂದ, ಡಾ.ಮಹೇಶ್, ಕೆ.ಟಿ.ದರ್ಶನ್, ಶಿವರಾಮ್, ಎಸ್.ವಿ,ರಾಮದಾಸ್, ನಟರಾಜು, ಅನನ್ಯ ವಾಸುದೇವ ಇತರರು ಇದ್ದರು.