ಸೋಮವಾರಪೇಟೆ,ಜೂ.೧೦: ಕೊರೊನಾ ಸೋಂಕಿಗೆ ಒಳಗಾಗಿ ಸೀಲ್‌ಡೌನ್ ಆಗಿರುವ ಕುಟುಂಬದ ಆರೋಗ್ಯ ವಿಚಾರಿಸಲು ತೆರಳಿದ ಆಶಾ ಕಾರ್ಯಕರ್ತೆ ಹಾಗೂ ಗ್ರಾ.ಪಂ. ಅಧ್ಯಕ್ಷೆ ಸೇರಿದಂತೆ ಸೀಲ್‌ಡೌನ್ ಕುಟುಂಬ ಸದಸ್ಯರ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಐವರು ಆರೋಪಿಗಳ ವಿರುದ್ಧ ಮೊಕದ್ದಮೆ ದಾಖಲಾಗಿದೆ.

ಹಾನಗಲ್ಲು ಬಾಣೆ ಗ್ರಾಮದ ನಿವಾಸಿ ಚಂದ್ರ ಅವರ ಕುಟುಂಬದ ಮೂವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಇವರ ಆರೋಗ್ಯ ವಿಚಾರಿಸಲು ತೆರಳಿದ ಆಶಾ ಕಾರ್ಯಕರ್ತೆ ಬಿಂದು, ಗ್ರಾ.ಪಂ. ಅಧ್ಯಕ್ಷೆ ಲಕ್ಷಿö್ಮÃ ಅವರುಗಳಿಗೆ ಯುವಕರ ಗುಂಪು ಅಡ್ಡಿಪಡಿಸಿ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇರೆ ಹಾನಗಲ್ಲುಬಾಣೆ ಗ್ರಾಮದ ರಘು, ರಂಜಿತ್, ಸುಭಾಷ್, ದರ್ಶನ್, ಮಧು ಅವರುಗಳ ವಿರುದ್ಧ ಮೊಕದ್ದಮೆ ದಾಖಲಾಗಿದೆ.

ಆಶಾ ಕಾರ್ಯಕರ್ತೆ ಬಿಂದು ಅವರು ಈ ಬಗ್ಗೆ ಹಾನಗಲ್ಲು ಗ್ರಾಮ ಪಂಚಾಯಿತಿಗೆ ದೂರು ನೀಡಿದ್ದು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಯು. ಅಸ್ಮ ಅವರು ಸೋಮವಾರಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಐವರು ಆರೋಪಿಗಳ ವಿರುದ್ಧ ಡಿಸಾಸ್ಟರ್ ಮ್ಯಾನೇಜ್‌ಮೆಂಟ್ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿಕೊಂಡಿರುವ ಪೊಲೀಸರು, ಮುಂದಿನ ಕ್ರಮ ಕೈಗೊಂಡಿದ್ದಾರೆ.