ಸುಂಟಿಕೊಪ್ಪ, ಜೂ. ೧೦: ರಾಷ್ಟಿçÃಯ ಹೆದ್ದಾರಿಯಲ್ಲಿ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಟಾಟಾ ಏಸ್‌ಗೆ ಡಿಕ್ಕಿಯಾಗಿದ್ದು ಅದೃಷ್ಟವಶಾತ್ ವಾಹನದಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿAದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬಲೆನೊ (ಕೆಎ೧೩-ಪಿ.೫೪೩೪) ಕೆದಕಲ್ ರಾಷ್ಟಿçÃಯ ಹೆದ್ದಾರಿ ೭ನೇ ಮೈಲು ಬಳಿ ತರಕಾರಿ ತುಂಬಿಸಿ ನಿಲಿಸಿದ್ದ ಟಾಟಾ ಏಸ್ ವಾಹನಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಟಾಟಾ ಏಸ್ ವಾಹನದಲ್ಲಿದ್ದ ತರಕಾರಿಯು ಚೆಲ್ಲಾಪಿಲ್ಲಿಯಾಗಿ ರಸ್ತೆಗೆ ಬಿದ್ದಿದೆ. ಕಾರು ವೇಗದ ಪರಿಣಾಮ ೨ ಪಲ್ಟಿಯಾಗಿ ರಸ್ತೆಗೆ ಬಿದ್ದಿದೆ ವಾಹನದಲ್ಲಿದ್ದವರು ಸಣ್ಣ ಪುಟ್ಟಗಾಯಗಳಿಂದ ಪಾರಾಗಿದ್ದಾರೆ. ಸುಂಟಿಕೊಪ್ಪ ಠಾಣಾಧಿಕಾರಿ ಪುನೀತ್ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.