ಚೆಟ್ಟಳ್ಳಿ, ಜೂ. ೧೧: ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಡಕರೆಯಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಈ ಪ್ರದೇಶದ ೧೦೦ ಜನರಿಗೆ ಗಂಟಲು ದ್ರವ ಪರೀಕ್ಷೆ ಮಾಡಿದೆ. ರ‍್ಯಾಪಿಡ್ ಆ್ಯಂಟಿಜನ್ ಪರೀಕ್ಷೆಯಲ್ಲಿ ೪ ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.

ಕಂಡಕರೆಯ ಗಂಟಲು ಪರೀಕ್ಷಾ ಸ್ಥಳಕ್ಕೆ ಕೊಡಗು ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ರಾಜ್ ಗೋಪಾಲ್, ಚೆಟ್ಟಳ್ಳಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಂದೀಶ್ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಸುನಿತ ಮಂಜುನಾಥ್, ಗ್ರಾಮ ಪಂಚಾಯಿತಿ ಸದಸ್ಯರಾದ ತೀರ್ಥಕುಮಾರ್, ಮಂಜುನಾಥ್, ಸಿಂಧು, ಆರೋಗ್ಯ ಇಲಾಖಾ ಸಿಬ್ಬಂದಿಗಳಾದ ಲೋಕೇಶ್, ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.