ಮಡಿಕೇರಿ, ಜೂ. ೧೦: ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಉದ್ದಿಮೆಗಳ ಮಂತ್ರಾಲಯವು, ಪ್ರಧಾನಮಂತ್ರಿ ಅವರ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ (Pಒಈಒಇ)ಯನ್ನು ಹೊಸದಾಗಿ ಪ್ರಾರಂಭಿಸುತ್ತಿದೆ.

ಈ ಯೋಜನೆಯಡಿ, ವೈಯುಕ್ತಿಕ ಕಿರು ಆಹಾರ ಸಂಸ್ಕರಣಾ ಘಟಕಗಳ ಉನ್ನತೀಕರಣ, ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಗುಂಪುಗಳು, ಉತ್ಪಾದಕರ ಸಹಕಾರ ಸಂಘಗಳು ಹಾಗೂ ಸಹಕಾರ ಸೊಸೈಟಿಗಳಿಗೆ ಬಂಡವಾಳ ಹೂಡಿಕೆ, ಸಾಮಾನ್ಯ ಮೂಲಭೂತ ಸೌಕರ್ಯಕ್ಕಾಗಿ ಬ್ರಾö್ಯಂಡಿAಗ್ ಹಾಗೂ ಮಾರುಕಟ್ಟೆಗೆ ಬೆಂಬಲ ನೀಡಲಾಗುತ್ತದೆ.

ಈ ಯೋಜನೆಗೆ ಸಂಬAಧಿಸಿದAತೆ ಸೂಕ್ತ ಫಲಾನುಭವಿಗಳನ್ನು ಗುರುತಿಸುವಿಕೆ, ಯೋಜನಾ ವರದಿ ಸಿದ್ದತೆ, ಫಲಾನುಭವಿಗಳು ಸಾಲ ಪಡೆಯಲು ಬ್ಯಾಂಕ್‌ನೊAದಿಗೆ ಸಂಪರ್ಕ, ಘಟಕಗಳ ನೋಂದಣಿ ಹಾಗೂ ಕೈ ಆಸರೆ ಬೆಂಬಲ ನೀಡುವುದಕ್ಕೆ ಜಿಲ್ಲಾ ಮಟ್ಟಕ್ಕೆ ನಾಲ್ಕು ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಹಾರ ತಂತ್ರಜ್ಞಾನದ/ ಆಹಾರ ಇಂಜಿನಿಯರಿAಗ್‌ನಲ್ಲಿ ಪ್ರತಿಷ್ಠಿತ ರಾಷ್ಟç/ ಅಂತರಾಷ್ಟಿçÃಯ ವಿಶ್ವವಿದ್ಯಾಲಯ/ ಸಂಸ್ಥೆಗಳಿAದ ಡಿಪ್ಲೊಮಾ/ ಪದವಿ ಪಡೆದಿರಬೇಕು. ಇವರಿಗೆ ಆಹಾರ ಸಂಸ್ಕರಣಾ ಕೈಗಾರಿಕೆಗಳಿಗೆ ತಂತ್ರಜ್ಞಾನ ಉನ್ನತೀಕರಣ, ಹೊಸ ಉತ್ಪನ್ನ ಅಭಿವೃದ್ಧಿ, ಗುಣಮಟ್ಟದ ಖಾತ್ರಿ, ಆಹಾರ ಭದ್ರತಾ ನಿರ್ವಹಣೆಗಾಗಿ ಸಲಹಾ ಸೇವೆಗಳನ್ನು ಒದಗಿಸಿದ ಅನುಭವವಿರಬೇಕು. ಕನ್ನಡ ಭಾಷಾ ಜ್ಞಾನ ಹೊಂದಿರುವ ಮತ್ತು ಆಹಾರ ಸಂಸ್ಕರಣಾ ಕೈಗಾರಿಕೆ/ ಬ್ಯಾಂಕಿAಗ್, ಡಿಪಿಆರ್ ಸಿದ್ಧಪಡಿಸುವಿಕೆಯಲ್ಲಿ ಹಾಗೂ ತರಬೇತಿಯಲ್ಲಿ ಅನುಭವುಳ್ಳ ವ್ಯಕ್ತಿಗಳಿಗೆ ಮೊದಲ ಅದ್ಯತೆ. ಸಂಪನ್ಮೂಲ ವ್ಯಕ್ತಿಗಳಿಗೆ ನೀಡಲಾಗುವ ಹಣ ಪಾವತಿಯನ್ನು ಅವರು ಬೆಂಬಲಿಸಿದAತಹ ಪ್ರತಿ ಫಲಾನುಭವಿಯನ್ನು ಆಧರಿಸಿ, ಬ್ಯಾಂಕಿನಿAದ ಸಾಲ ಮಂಜೂರಾದ ನಂತರ ಬ್ಯಾಂಕಿನಿAದ ಮಂಜೂರಾದ ಪ್ರತಿ ಸಾಲವನ್ನು ಆಧರಿಸಿ ರೂ. ೨೦ ಸಾವಿರಗಳನ್ನು ೨ ಕಂತುಗಳಲ್ಲಿ ಪಾವತಿಸಲಾಗುವುದು.

ಈ ಪೈಕಿ ಶೇ. ೫೦ ಮೊತ್ತವನ್ನು ಬ್ಯಾಂಕಿನಿAದ ಸಾಲ ಮಂಜೂರಾದ ನಂತರ ಹಾಗೂ ಉಳಿದ ಶೇ. ೫೦ ಹಣವನ್ನು ಘಟಕಗಳು ಜಿಎಸ್‌ಟಿ ಮತ್ತು ಆಧಾರ ನೋಂಣಿಯನ್ನು ಪಡೆದ ನಂತರ ಈSSಂI ವತಿಯಿಂದ ಪ್ರಮಾಣೀಕೃತ ಅನುಸರಣೆಯನ್ನು ಪಡೆದ ನಂತರ ನೀಡಲಾಗುವುದು. ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸುವಿಕೆಗೆ ತಾ. ೧೫ ಕೊನೆಯ ದಿನವಾಗಿದೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರು/ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.