ಕೂಡಿಗೆ, ಜೂ. ೧೦ : ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನೇಕ ಕೂಲಿ ಕಾರ್ಮಿಕ ಮತ್ತು ಬಡ ಕುಟುಂಬದವರು ಹೆಚ್ಚು ಇರುವುದರಿಂದ ಗ್ರಾಮಸ್ಥರು ತಮ್ಮ ಗ್ರಾಮಗಳ ಸಣ್ಣಮಟ್ಟದ ಕಾಮಗಾರಿ ಕೈಗೊಳ್ಳಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಖಾತರಿ ಯೋಜನೆಯಲ್ಲಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳುವಂತೆ ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎಸ್. ಮಂಜುನಾಥ ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.
ಗ್ರಾಮ ಪಂಚಾಯಿತಿ ವತಿಯಿಂದ ನರೇಗಾ ಯೋಜನೆ ಅಡಿಯಲ್ಲಿ ಮತ್ತು ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯಲ್ಲಿ ವಿವಿಧ ಗ್ರಾಮ ಉಪ ಕಾಮಗಾರಿಗಳನ್ನು ಕೈಗೊಳ್ಳುವ ಅವಕಾಶವಿದ್ದು ಅದರನ್ವಯ ಗ್ರಾಮದಲ್ಲಿ ರೈತರ ಜಮೀನಿಗೆ ತೆರಳುವ ಉಪರಸ್ತೆ, ಜಮೀನಿನಲ್ಲಿ ಕಣ, ಶಾಲೆಯ ತಡೆಗೊಡೆ ಆಟದ ಮೈದಾನ, ತಗ್ಗು ಪ್ರದೇಶಗಳಲ್ಲಿ ಅಡಿಕೆ ಗಿಡಗಳನ್ನು ನೆಡುವುದು ಸೇರಿದಂತೆ ಹಲವಾರು ಕಾಮಗಾರಿಗಳನ್ನು ಮಾಡಲು ಗ್ರಾಮ ಪಂಚಾಯಿತಿ ಅನುಮತಿಯನ್ನು ನೀಡುತ್ತದೆ. ಇದರ ಸದುಪಯೋಗವನ್ನು ಗ್ರಾಮಸ್ಥರು ಪಡೆದುಕೊಳ್ಳಬೇಕು. ಅಲ್ಲದೆ ಕೆಲಸ ಮಾಡಿದ ಹಣ ನೇರವಾಗಿ ಅವರವರ ಖಾತೆಗೆ ಜಮೆಯಾಗುತ್ತದೆ ಎಂದು ಮಂಜುನಾಥ ತಿಳಿಸಿದ್ದಾರೆ.