ಬೆAಗಳೂರು, ಜೂ. ೧೦: ಕೋವಿಡ್-೧೯ ಪಾಸಿಟಿವಿಟಿ ಪ್ರಕರಣ ಹೆಚ್ಚಿರುವ ಕೊಡಗು ಜಿಲ್ಲೆ ಸೇರಿದಂತೆ ಹನ್ನೊಂದು ಜಿಲ್ಲೆಗಳಲ್ಲಿನ ಲಾಕ್‌ಡೌನ್ ಮುಂದುವರಿಸುವAತೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸಂಜೆ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಕೋವಿಡ್ ೧೯ ಪರಿಸ್ಥಿತಿ ಕುರಿತಂತೆ ಸಭೆ ನಡೆಸಿದರು.ಕೋವಿಡ್-೧೯ ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಬೆಂಗಳೂರು, ಜೂ. ೧೦: ಕೋವಿಡ್-೧೯ ಪಾಸಿಟಿವಿಟಿ ಪ್ರಕರಣ ಹೆಚ್ಚಿರುವ ಕೊಡಗು ಜಿಲ್ಲೆ ಸೇರಿದಂತೆ ಹನ್ನೊಂದು ಜಿಲ್ಲೆಗಳಲ್ಲಿನ ಲಾಕ್‌ಡೌನ್ ಮುಂದುವರಿಸುವAತೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸಂಜೆ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಕೋವಿಡ್ ೧೯ ಪರಿಸ್ಥಿತಿ ಕುರಿತಂತೆ ಸಭೆ ನಡೆಸಿದರು.

ಕೋವಿಡ್-೧೯ ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ (ಮೊದಲ ಪುಟದಿಂದ) ರೀತಿಯ ಬದಲಾವಣೆ ಇರುವುದಿಲ್ಲ, ಅಂದರೆ ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ. ಹಾಗೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ.

ಸಡಿಲಿಕೆಗಳು

ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಈ ಕೆಳಕಂಡ ಸಡಿಲಿಕೆಗಳೊಂದಿಗೆ ದಿನಾಂಕ: ೧೪-೦೬-೨೦೨೧ ರ ಬೆಳಿಗ್ಗೆ ೬ ಗಂಟೆಯಿAದ ದಿನಾಂಕ: ೨೧-೦೬-೨೦೨೧ ಬೆಳಿಗ್ಗೆ ೬ ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಎಲ್ಲಾ ಕಾರ್ಖಾನೆಗಳನ್ನು ಶೇ. ೫೦ ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಇಂಡಷ್ಟಿçÃಗಳು ಶೇ. ೩೦ ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ.

ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ ೬ ರಿಂದ ೧೦ ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ ೨ ಗಂಟೆಯವರೆಗೆ ಅವಕಾಶ ನೀಡಲಾಗಿದೆ.

ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ ಹಾಗೂ ನಿರ್ಮಾಣ ಚಟುವಟಿಕೆ ಸಂಬAಧಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ ನೀಡಲಾಗಿದೆ.

ಪಾರ್ಕ್ಗಳನ್ನು ಬೆಳಿಗ್ಗೆ ೫ ರಿಂದ ೧೦ ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ ೬ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ. ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ. ಕೋವಿಡ್ ಕರ್ಫ್ಯೂ ರಾತ್ರಿ ೭ ಗಂಟೆಯಿAದ ಬೆಳಿಗ್ಗ ೫ ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ ೭ ಗಂಟೆಯಿAದ ಸೋಮವಾರ ಬೆಳಿಗ್ಗೆ ೫ ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಉಳಿದಂತೆ ವಿವರವಾದ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

- ಬಿ.ಜಿ. ರವಿಕುಮಾರ್