ಮಡಿಕೇರಿ, ಜೂ. ೧೦: ಜಿಲ್ಲೆಯ ೧೦ ರಿಂದ ೧೨ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್-೧೯ ಪ್ರಕರ ಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಅಂತಹ ಪ್ರದೇಶದಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ಜೊತೆಗೆ ಕೋವಿಡ್ ಪರೀಕ್ಷೆ ಹೆಚ್ಚಿಸಿ, ಸೋಂಕಿತ ಪ್ರಕರಣ ಗಳನ್ನು ನಿಯಂತ್ರಣಕ್ಕೆ ತರುವಂತೆ ಸಂಬAಧಪಟ್ಟ ಇಲಾಖೆ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಅನ್ಬುಕುಮಾರ್ ನಿರ್ದೇಶನ ನೀಡಿದ್ದಾರೆ.
ಕೋವಿಡ್ ನಿಯಂತ್ರಣ ಮತ್ತು ಪ್ರಾಕೃತಿಕ ವಿಕೋಪ ಸಿದ್ಧತೆ ಬಗ್ಗೆ ನಗರದ ಜಿ.ಪಂ. ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.
ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚು ಕಂಡುಬರುವ ಕಡೆ ಇತರರಿಗೆ ಹರಡದಂತೆ ಮುನ್ನೆಚ್ಚರ ವಹಿಸಬೇಕು. ಆ ದಿಸೆಯಲ್ಲಿ ಪಾಸಿಟಿವ್ ಬಂದವರನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಬೇಕು. ಇನ್ನೊಂದು ವಾರದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಬೇಕು. ಜೊತೆಗೆ ಮರಣ ಪ್ರಮಾಣವನ್ನು ಸೊನ್ನೆಗೆ ತರಬೇಕು. ಆ ನಿಟ್ಟಿನಲ್ಲಿ ಗಂಭೀರವಾಗಿ ಪ್ರಯತ್ನಿಸುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಈಗಾಗಲೇ ಮುಂಗಾರು ಆರಂಭವಾಗಿರುವುದರಿAದ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಯಾವುದೇ ರೀತಿಯಲ್ಲಿ ಲೋಪ ಉಂಟಾಗದAತೆ ಮುನ್ನೆಚ್ಚರ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಮಳೆಹಾನಿ ಸಂಬAಧ ಕಳೆದ ವರ್ಷದ ಕಾಮಗಾರಿಗಳನ್ನು ಪೂರ್ಣಗೊಳಿಸಿ ವರದಿ ನೀಡಬೇಕು. ಮಳೆ ಆರಂಭವಾದರೆ ನವೆಂಬರ್ ತನಕ ಯಾವುದೇ ಕಾಮಗಾರಿ ಕೈಗೊಳ್ಳಲು ಕಷ್ಟಸಾಧ್ಯವಾಗಲಿದೆ. ಈಗಾಗಲೇ ಅನುಮೋದನೆ ಪಡೆಯಲಾಗಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬAಧಪಟ್ಟ ಇಂಜಿನಿಯರ್ಗಳಿಗೆ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಕಿರುಪುಸ್ತಕ ಹೊರತರುವಂತೆ ಸಲಹೆ ಮಾಡಲಾಗಿತ್ತು.
ಆದರೆ ಇದುವರೆಗೆ ಈ ಕೆಲಸ ಆಗಿಲ್ಲ, ಮುಂದಿನ ದಿನದಲ್ಲಿ ಕಿರುಪುಸ್ತಕ ಹೊರತರಬೇಕು. ಪ್ರವಾಹ ಹಾಗೂ ಭೂ ಕುಸಿತ ಸೂಕ್ಷö್ಮ ಪ್ರದೇಶಗಳ ನಿಖರ ಮಾಹಿತಿ ಒದಗಿಸಬೇಕು.
ಕಳೆದ ವರ್ಷ ಉಂಟಾದ ಮಳೆಹಾನಿ ಸಂಬAಧಿಸಿದAತೆ ಶೇ.೭೦ ರಷ್ಟು ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ಪಡೆದಿಲ್ಲವೇಕೆ ಎಂದು ಪ್ರಶ್ನಿಸಿದ ಅವರು, ಕಳೆದ ವರ್ಷದ ಮಳೆಹಾನಿ ಕಾಮಗಾರಿಗಳನ್ನು ಕೈಗೊಳ್ಳದೆ ಸಾರ್ವಜನಿಕರಿಗೆ ಉತ್ತರಿಸುವುದಾರೂ ಹೇಗೆ ಎಂದು ಇಂಜಿನಿಯರ್ಗಳಿಗೆ ಎಚ್ಚರಿಸಿದರು.
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮಾತನಾಡಿ, ಪ್ರಾಕೃತಿಕ ವಿಕೋಪ ಸಂಬAಧಿಸಿದAತೆ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾ ಹಾಗೂ ಮುನ್ನೆಚ್ಚರ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಮಳೆಹಾನಿ ಸಂಬAಧ ಕಳೆದ ವರ್ಷದ ಕಾಮಗಾರಿಗಳನ್ನು ಪೂರ್ಣಗೊಳಿಸಿ ವರದಿ ನೀಡಬೇಕು. ಮಳೆ ಆರಂಭವಾದರೆ ನವೆಂಬರ್ ತನಕ ಯಾವುದೇ ಕಾಮಗಾರಿ ಕೈಗೊಳ್ಳಲು ಕಷ್ಟಸಾಧ್ಯವಾಗಲಿದೆ. ಈಗಾಗಲೇ ಅನುಮೋದನೆ ಪಡೆಯಲಾಗಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬAಧಪಟ್ಟ ಇಂಜಿನಿಯರ್ಗಳಿಗೆ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಕಿರುಪುಸ್ತಕ ಹೊರತರುವಂತೆ ಸಲಹೆ ಮಾಡಲಾಗಿತ್ತು.
ಆದರೆ ಇದುವರೆಗೆ ಈ ಕೆಲಸ ಆಗಿಲ್ಲ, ಮುಂದಿನ ದಿನದಲ್ಲಿ ಕಿರುಪುಸ್ತಕ ಹೊರತರಬೇಕು. ಪ್ರವಾಹ ಹಾಗೂ ಭೂ ಕುಸಿತ ಸೂಕ್ಷö್ಮ ಪ್ರದೇಶಗಳ ನಿಖರ ಮಾಹಿತಿ ಒದಗಿಸಬೇಕು.
ಕಳೆದ ವರ್ಷ ಉಂಟಾದ ಮಳೆಹಾನಿ ಸಂಬAಧಿಸಿದAತೆ ಶೇ.೭೦ ರಷ್ಟು ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ಪಡೆದಿಲ್ಲವೇಕೆ ಎಂದು ಪ್ರಶ್ನಿಸಿದ ಅವರು, ಕಳೆದ ವರ್ಷದ ಮಳೆಹಾನಿ ಕಾಮಗಾರಿಗಳನ್ನು ಕೈಗೊಳ್ಳದೆ ಸಾರ್ವಜನಿಕರಿಗೆ ಉತ್ತರಿಸುವುದಾರೂ ಹೇಗೆ ಎಂದು ಇಂಜಿನಿಯರ್ಗಳಿಗೆ ಎಚ್ಚರಿಸಿದರು.
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮಾತನಾಡಿ, ಪ್ರಾಕೃತಿಕ ವಿಕೋಪ ಸಂಬAಧಿಸಿದAತೆ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾ ಹಾಗೂ ಆಡಳಿತಾಧಿಕಾರಿಯೂ ಆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರ ಗಮನಕ್ಕೆ ತಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಮಾಹಿತಿ ನೀಡಿ ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಈಗಾಗಲೇ ದಿನದ ೨೪ ಗಂಟೆಯೂ ಕಾರ್ಯ ನಿರ್ವಹಿಸುವಲ್ಲಿ ಸಹಾಯವಾಣಿ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. ಈಗಾಗಲೇ ಎನ್ಡಿಆರ್ಎಫ್ ತಂಡ ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ. ಜಿಎಸ್ಐ ವತಿಯಿಂದ ಸೂಕ್ಷö್ಮ ಪ್ರದೇಶಗಳನ್ನು ಗುರುತಿಸಲಾಗಿದೆ ಎಂದರು.
ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ವಿವಿಧ ಇಲಾಖೆಗಳಿಗೆ ಬೇಕಿರುವ ರೈನ್ ಕೋಟ್, ಗಂಬೂಟ್, ಕೊಡೆ ಹಾಗೂ ಇತರೆ ಅಗತ್ಯ ಉಪಕರಣಗಳನ್ನು ಪೂರೈಸಲು ಕ್ರಮವಹಿಸಲಾಗಿದೆ. ಹಾಗೆಯೇ ಭಾಗಮಂಡಲದಲ್ಲಿ ಪ್ರವಾಹ ಉಂಟಾದ ಸಂದರ್ಭದಲ್ಲಿ ಬೋಟ್ ಹಾಗೂ ಗೃಹ ರಕ್ಷಕದಳದವರನ್ನು ನಿಯೋಜಿಸಲು ಕ್ರಮ ವಹಿಸಲಾಗಿದೆ ಎಂದರು.
ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್, ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಕಾರ್ಯಪ್ಪ, ಅಧೀಕ್ಷಕ ಡಾ. ಮಂಜುನಾಥ್, ಜಿ.ಪಂ. ಇಂಜಿನಿಯರ್ ಶ್ರೀಕಂಠಯ್ಯ, ಪಿಎಂಜಿಎಸ್ವೈ ಇಂಜಿನಿಯರ್ ಪ್ರಭು, ಸೆಸ್ಕ್ ಇಂಜಿನಿಯರ್ ಅಶೋಕ್ ಇತರರು ಹಲವು ಮಾಹಿತಿ ನೀಡಿದರು.