ಕುಶಾಲನಗರ, ಜೂ. ೧೦: ಕೊಣನೂರು -ಮಾಕುಟ್ಟ ರಾಜ್ಯ ಹೆದ್ದಾರಿಯ ವ್ಯಾಪ್ತಿಯಲ್ಲಿ ಬರುವ ಗುಡ್ಡೆಹೊಸೂರು ಸಿದ್ದಾಪುರ ನಡುವೆ ೪.೮೦ ಕಿ.ಮೀ. ಉದ್ದದ ರಸ್ತೆ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿರುವ ಬಗ್ಗೆ ಲೋಕೋಪಯೋಗಿ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸ್ಥಳೀಯರು ಲಿಖಿತ ದೂರು ನೀಡಿದ್ದು, ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಬಾಳುಗೋಡು ನಿವಾಸಿ ಸಾಮಾಜಿಕ ಕಾರ್ಯಕರ್ತ ನಂಗಾರು ಜಗ ಎಂಬವರು ಈ ಬಗ್ಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಅಂದಾಜು ರೂ. ೧೩ ಕೋಟಿ ವೆಚ್ಚದಲ್ಲಿ ಕಾಮಗಾರಿ ಆರಂಭಗೊAಡಿದ್ದು ಇಲಾಖೆಯ ಅಧಿಕಾರಿಗಳ ನಿರ್ಲಕ್ಯದಿಂದ ಅಂದಾಜು ಪಟ್ಟಿಯಂತೆ ಕಾಮಗಾರಿ ನಡೆಯುತ್ತಿಲ್ಲ, ರಸ್ತೆ ಕಾಮಗಾರಿ ಪ್ರಗತಿಯಲ್ಲಿದ್ದು ರಸ್ತೆಯ ಅಗಲೀಕರಣ ಅಂದಾಜು ಪಟ್ಟಿಯಂತೆ ಆಗಿರುವು ದಿಲ್ಲ, ಚರಂಡಿ ಮತ್ತು ಪಾದಚಾರಿ ರಸ್ತೆ ಇಲ್ಲದೆ ರಸ್ತೆ ನಿರ್ಮಿಸಲಾಗುತ್ತಿದೆ, ಮೋರಿಗಳ ನಿರ್ಮಾಣ ಸಂದರ್ಭ ಅಂದಾಜು ಪಟ್ಟಿಯಂತೆ ಕಾಮಗಾರಿ ನಿರ್ವಹಿಸದೇ ಅಲ್ಲಲ್ಲಿ ಮೋರಿಗಳು ಕುಸಿದಿರುವುದು ಕಂಡುಬAದಿದೆ.
ವಿದ್ಯುತ್ ಕಂಬಗಳು ಹಾಗೂ ಕುಡಿಯುವ ನೀರಿನ ಪೈಪ್ ಲೈನ್ ಮೇಲ್ಭಾಗದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದೆ ಕಳಪೆ ಗುಣಮಟ್ಟದ ಸಾಮಾಗ್ರಿಗಳನ್ನು ಬಳಸಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
-ಚಂದ್ರ ಮೋಹನ್