ಸುAಟಿಕೊಪ್ಪ, ಜೂ.೧೧: ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ೬ ತಿಂಗಳಿನಿAದ ಆ್ಯಂಬ್ಯುಲೆನ್ಸ್ ಕೆಟ್ಟು ನಿಂತಿದ್ದು ಸಾರ್ವಜನಿಕರಿಗೆ ತೊಂದರೆಯಾಗಿತ್ತು ಈ ಬಗ್ಗೆ ಪತ್ರಿಕೆಯಲ್ಲಿ ವರದಿಯಾಗಿತ್ತು. ಇದೀಗ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬದಲಿ ಆ್ಯಂಬ್ಯುಲೆನ್ಸ್ ಲಭ್ಯವಾಗಿದೆ.
ಶಾಸಕ ಅಪ್ಪಚ್ಚು ರಂಜನ್ ಅವರು ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದಾಗ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹಾಗೂ ಸದಸ್ಯರುಗಳು ಆ್ಯಂಬ್ಯುಲೆನ್ಸ್ ವಾಹನ ಬೇಕೆಂದು ಕೋರಿಕೊಂಡಿದ್ದರು. ಶಾಸಕರು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೂಚಿಸಿದ ಮೇರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಅಧಿಕಾರಿಗಳು ಆ್ಯಂಬ್ಯುಲೆನ್ಸ್ ಒದಗಿಸಿಕೊಟ್ಟಿದ್ದಾರೆ.
ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಮಿಸಿದ ನೂತನ ಆ್ಯಂಬ್ಯುಲೆನ್ಸ್ ಅನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಮಹೇಶ್, ಸದಸ್ಯರುಗಳಾದ ಪಿ.ಆರ್.ಸುನಿಲ್ ಕುಮಾರ್, ಸೋಮನಾಥ್ ಶಾಂತಿ, ಮಂಜುಳಾ, ಗೀತಾ, ವಸಂತಿ, ನಾಗರತ್ನ ಸುರೇಶ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಜೀವನ್, ನಿಸರ್ಗ ಸಿಬ್ಬಂದಿಗಳು ಪಡೆದುಕೊಂಡರು.