ಕುಶಾಲನಗರ, ಜೂ. ೧೨: ನಿರಂತರವಾಗಿ ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕುಶಾಲನಗರ ಕಾಂಗ್ರೆಸ್ ಕಾರ್ಯಕರ್ತರು ಎತ್ತಿನ ಗಾಡಿಯನ್ನು ಪೆಟ್ರೋಲ್ ಬಂಕಿಗೆ ತರುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪೆಟ್ರೋಲ್ ದರ ಖಂಡಿಸಿ ಕುಶಾಲನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಕುಶಾಲನಗರ-ಮೈಸೂರು ರಸ್ತೆಯ ಪೆಟ್ರೋಲ್ ಬಂಕ್ ಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅನಂತ್ ಕುಮಾರ್ ಮತ್ತು ಪಟ್ಟಣದ ಕಾಂಗ್ರೆಸ್ ಅಧ್ಯಕ್ಷ ಶರೀಫ್ ಇಬ್ರಾಹಿಂ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಇಂಟಕ್ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಪ್ರಮುಖರಾದ ಅಜ್ಜಳ್ಳಿ ರವಿ ಮತ್ತಿತರು ಪಾಲ್ಗೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕುಶಾಲನಗರ-ಮೈಸೂರು ರಸ್ತೆಯ ಪೆಟ್ರೋಲ್ ಬಂಕ್ನಲ್ಲಿ ಕೋವಿಡ್ ನಿಯಮಾನುಸಾರ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪ್ರಮುಖರಾದ ಅಶ್ರಫ್, ಪೂವಯ್ಯ, ನಜೀರ್, ಸಯ್ಯದ್ ಸಾಜೀದ್, ಅಶ್ರಫ್ ಮತ್ತಿತರು ಇದ್ದರು.