ತಾ. ೧೮ ರಂದು ಐಎಂಎಯಿAದ ದೇಶವ್ಯಾಪಿ ಪ್ರತಿಭಟನೆ

ನವದೆಹಲಿ, ಜೂ. ೧೨: ಕೊರೊನಾ ಸಂಕಷ್ಟದಲ್ಲಿ ದೇಶದ ವಿವಿಧ ಭಾಗಗಳಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ತಾ. ೧೮ ರಂದು ದೇಶವ್ಯಾಪಿ ಪ್ರತಿಭಟನೆಗೆ ಐಎಂಎ ಕರೆ ನೀಡಿದೆ. ‘ರಕ್ಷಕರನ್ನು ರಕ್ಷಿಸಿ’ ಎಂಬ ಘೋಷ ವಾಕ್ಯದ ಅಡಿಯಲ್ಲಿ ದೇಶವ್ಯಾಪಿ ಪ್ರತಿಭಟನೆ ನಡೆಯಲಿದೆ. ಐಎಂಎಯಿAದ ನೀಡಲಾಗಿರುವ ಹೇಳಿಕೆಯ ಪ್ರಕಾರ ರಾಜ್ಯ, ಸ್ಥಳೀಯ ಮಟ್ಟದಲ್ಲಿ ತನ್ನ ಸಂಘಟನೆಗಳಿಗೆ ಸೂಚನೆ ನೀಡಲಾಗಿದ್ದು, ಕಪ್ಪು ಬ್ಯಾಡ್ಜ್, ಮಾಸ್ಕ್, ರಿಬ್ಬನ್, ಶರ್ಟ್ನ್ನು ಧರಿಸಿ, ವೈದ್ಯಕೀಯ ಸಿಬ್ಬಂದಿಗಳ ಮೇಲಿನ ಹಲ್ಲೆಯ ಬಗ್ಗೆ ಅರಿವು ಅಭಿಯಾನ ಮೂಡಿಸುವ ಮೂಲಕ ವೈದ್ಯರು ಪ್ರತಿಭಟನೆ ನಡೆಸುವಂತೆ ಕರೆ ನೀಡಲಾಗಿದೆ.

ಕಾಳಸಂತೆಯಲ್ಲಿ ಬ್ಲ್ಯಾಕ್ ಫಂಗಸ್ ಔಷಧಿ ಮಾರಾಟ ಯತ್ನ : ಬಂಧನ

ಬೆAಗಳೂರು, ಜೂ. ೧೨: ಕಾಳಸಂತೆಯಲ್ಲಿ ಬ್ಲ್ಯಾಕ್ ಫಂಗಸ್ ಔಷಧಿ ಮಾರಾಟಕ್ಕೆ ಯತ್ನಿಸಿದ ಆರೋಪಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಮ್ ಮೋಹನ್ ಬಂಧಿತ ಆರೋಪಿ. ಬಂಧಿತನಿAದ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ನೀಡಲಾಗುತ್ತಿದ್ದ ೮೦ ಮಾತ್ರೆ ಮತ್ತು ೧೭ ಇಂಜೆಕ್ಷನ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿAದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಆರೋಪಿ ನಿಗದಿತ ದರಕ್ಕಿಂತ ಎರಡು ಪಟ್ಟು ಹೆಚ್ಚು ದರದಲ್ಲಿ ಮಾರಾಟ ಮಾಡುತ್ತಿದ್ದ ಎಂದು ಮಾಹಿತಿ ನೀಡಿದರು. ವಶಪಡಿಸಿಕೊಂಡ ಚುಚ್ಚುಮದ್ದು ಹಾಗೂ ಮಾತ್ರೆಗಳ ಮೌಲ್ಯ ನಾಲ್ಕೂವರೆ ಲಕ್ಷ ರೂಪಾಯಿ ಇರಬಹುದು ಎಂದು ತಿಳಿಸಿದ್ದಾರೆ.