ಕೂಡಿಗೆ, ಜೂ. ೧೨: ಪಶುಪಾಲನೆ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕ ಡಾ, ಪ್ರಶಾಂತ್ ಮೂರ್ತಿ ಹಾಗೂ ಜಿಲ್ಲೆಯ ಅಧಿಕಾರಿಗಳು ಹಸುಗಳಿಗೆ ಕಾಲು ಬಾಯಿ ರೋಗ ಕಾಣಿಸಿಕೊಂಡಿರುವ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸೂಚನೆ ಮೇರೆಗೆ ಪಶುಪಾಲನೆ ಇಲಾಖೆಯ ಜಂಟಿ ನಿರ್ದೇಶಕರು ಮತ್ತು ಜಿಲ್ಲಾ ಪಶುಪಾಲನೆ ಅಧಿಕಾರಿಗಳ ತಂಡ ಕುಶಾಲನಗರ ತಾಲೂಕಿನ ತೊರೆನೂರು ಶಿರಂಗಾಲ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ಆಯಾ ಗ್ರಾಮದಲ್ಲಿ ಹಸುಗಳಿಗೆ ಕಾಣಿಸಿಕೊಂಡಿರುವ ಕಾಲು ಬಾಯಿ ಜ್ವರಕ್ಕೆ ಚಿಕಿತ್ಸೆಯನ್ನು ನೀಡಿರುವ ಬಗ್ಗೆ ಪರಿಶೀಲನೆ ನಡೆಸಿತು.
ನಂತರ ಸೋಮವಾರಪೇಟೆ ತಾಲೂಕಿನ ಪಶು ವೈದ್ಯಾಧಿಕಾರಿಗಳ ಸಭೆಯನ್ನು ನಡೆಸಿ ಕಾಲು ಬಾಯಿ ಜ್ವರಕ್ಕೆ ಸೂಕ್ತ ಚಿಕಿತ್ಸೆಯ ಜೊತೆಗೆ ಲಸಿಕೆಯನ್ನು ನೀಡಲು ಮತ್ತು ಈಗಾಗಲೇ ಜ್ವರ ಕಾಣಿಸಿಕೊಂಡಿರುವ ಗ್ರಾಮಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಲ್ಲದೆ ಪ್ರಾಥಮಿಕ ಪಶು ಚಿಕಿತ್ಸಾಲಯಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದರು.
ಜಾನುವಾರುಗಳಿಗೆ ಕಾಲುಬಾಯಿ ಜ್ವರಕ್ಕೆ ಸಂಬAಧಿಸಿದAತೆ ಪಶುಪಾಲನಾ ಇಲಾಖೆ ಎಚ್ಚೆತ್ತುಕೊಳ್ಳದ ಬಗ್ಗೆ ‘ಶಕ್ತಿ’ಯಲ್ಲಿ ವರದಿ ಪ್ರಕಟಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.