ಬೈಕ್ ಅಪಘಾತ: ನಟ ಸಂಚಾರಿ ವಿಜಯ್ಗೆ ಗಂಭೀರ ಗಾಯ
ಬೆಂಗಳೂರು, ಜೂ. ೧೩: ರಾಷ್ಟçಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರು ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ನಿನ್ನೆ ಸ್ನೇಹಿತರ ಜೊತೆ ಬೈಕ್ನಲ್ಲಿ ತೆರಳುತ್ತಿದ್ದಾಗ ಅಪಘಾತವಾಗಿದೆ. ಕೂಡಲೇ ಅವರನ್ನು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದರಿAದ ಅವರಿಗೆ ಶಸ್ತçಚಿಕಿತ್ಸೆ ನಡೆಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿರುವುದರಿಂದ ಇನ್ನು ೪೮ ಗಂಟೆಗಳ ಕಾಲ ಏನನ್ನು ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಅಕ್ರಮ ವಲಸಿಗರನ್ನು ರಾಜ್ಯದಿಂದ ಹೊರಗೆ ಕಳುಹಿಸುತ್ತೇವೆ- ಸಿಎಂ
ಶಿವಮೊಗ್ಗ, ಜೂ. ೧೩: ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಿ ರಾಜ್ಯದಿಂದ ಹೊರಗೆ ಕಳುಹಿಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿಕಾರಿಪುರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಕ್ರಮವಾಗಿ ಇರುವ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ನಿವಾಸಿಗಳ ಪತ್ತೆಗಾಗಿ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು. ಅಧಿಕಾರಿಗಳು ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಪ್ರಸ್ತುತ ಲಾಕ್ಡೌನ್ ಮುಂದುವರೆಸಿರುವ ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾದರೆ ಲಾಕ್ಡೌನ್ ತೆರವುಗೊಳಿಸುವುದಾಗಿ ಯಡಿಯೂರಪ್ಪ ಹೇಳಿದರು.