ಮಡಿಕೇರಿ, ಜೂ. ೧೩: ಬಲ್ಲಮಾವಟಿ ಗ್ರಾ.ಪಂ. ವತಿಯಿಂದ ಕೋವಿಡ್-೧೯ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಆಡಳಿತ ಮಂಡಳಿಯವರು ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದು, ಕೋವಿಡ್ ಸೋಂಕಿತರ ಸಂಖ್ಯೆ ಮತ್ತಷ್ಟು ಉಲ್ಬಣಗೊಳ್ಳದಂತೆ ನಿಗಾವಹಿಸುವ ನಿಟ್ಟಿನಲ್ಲಿ ಅಕ್ಕಪಕ್ಕದ ಪಂಚಾಯಿತಿಗಳಲ್ಲಿ ಕೋವಿಡ್ ಸೋಂಕಿತರ ಪ್ರಕರಣ ಹೆಚ್ಚುತ್ತಿರುವುದರಿಂದ, ಬಲ್ಲಮಾವಟಿ ಗ್ರಾ.ಪಂ. ವ್ಯಾಪ್ತಿಗೆ ಕೂಲಿ, ಕೃಷಿ ಆಧಾರಿತ ವೃತ್ತಿಗಾಗಿ ಹೊರಗಿನಿಂದ ಬರುವ ಕೂಲಿ ಕಾರ್ಮಿಕರು ಹಾಗೂ ಕೂಲಿ ಕಾರ್ಮಿಕರನ್ನು ಕರೆ ತರುವ ವಾಹನ ಚಾಲಕರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿಯನ್ನು ಪಡೆದಿದ್ದಲ್ಲಿ ಮಾತ್ರ ಪ್ರವೇಶ ಅನುಮತಿಸಲು ತೀರ್ಮಾನಿಸಿರುವ ನಿರ್ಣಯ ಕೈಗೊಳ್ಳಲಾಗಿದೆ. ತಪ್ಪಿದ್ದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದೆಂದು ಪಂಚಾಯಿತಿ ಪ್ರಕಟಣೆ ತಿಳಿಸಿದೆ.