ಕೂಡಿಗೆ, ಜೂ. ೧೩: ಕೂಡು ಮಂಗಳೂರು ಗ್ರಾ.ಪಂ. ಮಾಸಿಕ ಸಭೆಯು ಗ್ರಾ. ಪಂ. ಅಧ್ಯಕ್ಷೆ ಇಂದಿರಾ ರಮೇಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾ.ಪಂ. ವ್ಯಾಪ್ತಿಯಲ್ಲಿ ಕೋವಿಡ್ ನಿಯಂತ್ರಣದ ಬಗ್ಗೆ ಹಮ್ಮಿಕೊಳ್ಳ ಲಾಗಿರುವ ವಿವಿಧ ಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆದವು.
೧೫ ನೇ ಹಣಕಾಸು ಯೋಜನೆಯ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಿಯಾ ಯೋಜನೆಯನ್ನು ತಯಾರಿಸ ಲಾಯಿತು. ಅಲ್ಲದೆ ಗ್ರಾಮ ಪಂಚಾಯಿತಿ ನಿಧಿಯ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಅವುಗಳ ಮೂಲಕ ಗ್ರಾಮದ ಪ್ರಮುಖ ಕಾಮಗಾರಿಗಳನ್ನು ನಡೆಸುವುದರ ಬಗ್ಗೆ ಚರ್ಚೆಗಳು ನಡೆಯಿತು. ಸಭೆಯಲ್ಲಿ ಹಾಜರಿದ್ದ ಸರ್ವ ಸದಸ್ಯರು ಆಯಾ ವಾರ್ಡ್ನ ಅಭಿವೃದ್ಧಿ ಬಗ್ಗೆ ಮತ್ತು ಕೈಗೊಳ್ಳುವ ಕಾಮಗಾರಿಯ ಬಗ್ಗೆ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಅಲ್ಲದೆ ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳುವ ವಿವಿಧ ಯೋಜನೆಗಳ ವಿಷಯದ ಬಗ್ಗೆ ಚರ್ಚೆ ಗಳು ನಡೆದವು. ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಬಾಸ್ಕರ್ ನಾಯಕ್ ಸೇರಿದಂತೆ ಸರ್ವ ಸದಸ್ಯರು ಗ್ರಾ. ಪಂ. ಅಭಿವೃದ್ಧಿ ಅಧಿಕಾರಿ ಸಂತೋಷ್ ಕಂದಾಯ ವಸೂಲಿಗಾರ ಅವಿನಾಶ್ ಇದ್ದರು.