ಮಡಿಕೇರಿ, ಜೂ. ೧೪: : ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಕುಲಪತಿ ಪ್ರೊ. ಎಂ.ಐ. ಸವದತಿ ನಿಧನಕ್ಕೆ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಸಿಬ್ಬಂದಿಗಳು ಮೌನಾಚರಣೆ ಸಲ್ಲಿಸಿ ಸಂತಾಪ ಸೂಚಿಸಿದರು.

ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ಸಭೆ ನಡೆಸಿ ಸವದತ್ತಿ ಅವರ ಸಾಧನೆ ಮತ್ತು ಕಾಲೇಜನ್ನು ವಿಶ್ವವಿದ್ಯಾನಿಲಯದ ಅಧೀನಕ್ಕೆ ಒಳಪಡಿಸಲು ಮಾಡಿದ ಪ್ರಯತ್ನವನ್ನು ಸ್ಮರಿಸಲಾಯಿತು. ಈ ಸಂದರ್ಭ ಪ್ರಾಂಶುಪಾಲರು, ಅಧ್ಯಾಪಕರು ಮತ್ತು ಅಧ್ಯಾಪಕೇತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.