ಮಡಿಕೇರಿ, ಜೂ. ೧೪: ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರು ಇತ್ತೀಚೆಗೆ ಕುಶಾಲನಗರ ಪಟ್ಟಣ ಪಂಚಾಯಿತಿ ಹಾಗೂ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕೋವಿಡ್ ನಿಯಂತ್ರಣ ಸಂಬAಧ ಪರಿಶೀಲನೆ ನಡೆಸಿದರು.

೭ನೇ ಹೊಸಕೋಟೆ, ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಗಳಿಗೆ ತೆರಳಿ ಕೊರೊನಾ ಸೋಂಕು ನಿಯಂತ್ರಣದ ಬಗ್ಗೆ ಪಂಚಾಯಿತಿಯಿAದ ಕೈಗೊಳ್ಳಲಾಗಿರುವ ಕ್ರಮದ ಬಗ್ಗೆ ಮಾಹಿತಿ ಪಡೆದುಕೊಂಡರು. ಸರ್ಕಾರದ ಮಾರ್ಗಸೂಚಿಯನ್ನು ಪಾಲನೆ ಮಾಡುವಂತೆ ಪಂಚಾಯಿತಿ ಪಿಡಿಓ, ಅಧ್ಯಕ್ಷರಿಗೆ ಸೂಚಿಸಿದರು.

ಬಸವನಹಳ್ಳಿಯಲ್ಲಿ ಬುಡಕಟ್ಟು ಜನರಿಗೆ ಆಯೋಜಿಸಲಾಗಿರುವ ಕೋವಿಡ್ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ವೈದ್ಯಕೀಯ ಸಿಬ್ಬಂದಿ ಹಾಗೂ ಸಾರ್ವಜನಿಕರೊಂದಿಗೆ ಚರ್ಚಿಸಿದರು.