ಬೆಂಗಳೂರು, ಜೂ. ೧೪: ಶನಿವಾರ ಅಪಘಾತಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿದ್ದ ನಟ ಸಂಚಾರಿ ವಿಜಯ್ ಅವರ ಮೆದುಳು ನಿಷ್ಕಿçಯಗೊಂಡಿದ್ದು, ಅಂಗಾAಗ ದಾನ ಮಾಡುವುದಕ್ಕೆ ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ. ಸಂಚಾರಿ ವಿಜಯ್ ಅವರ ಆರೋಗ್ಯ ಪರಿಸ್ಥಿತಿಯ ಬಗ್ಗೆ ಅಪೋಲೋ ಆಸ್ಪತ್ರೆಯ ವೈದ್ಯ ಡಾ. ಅರುಣ್ ನಾಯ್ಕ್ ಮಾಹಿತಿ ನೀಡಿದ್ದು, ಸಂಚಾರಿ ವಿಜಯ್ ಅವರ ಮೆದುಳಿಗೆ ಸಂಬAಧಿಸಿದAತೆ ಎರಡು ಅಪ್ನಿಯಾ ಟೆಸ್ಟ್ ಮಾಡಲಾಗಿದ್ದು, ವಿಜಯ್ ಅವರ ಮೆದುಳು ನಿಷ್ಕಿçಯಗೊಂಡಿರುವುದು ದೃಢಪಟ್ಟಿದ್ದು, ಬ್ರೆöÊನ್ ಡೆಡ್ ಆಗಿದೆ ಎಂದು ಹೇಳಿದ್ದಾರೆ. ವಿಜಯ್ ಅವರ ಅಂಗಾAಗ ದಾನಕ್ಕೆ ಕುಟುಂಬ ಸದಸ್ಯರು ನಿರ್ಧರಿಸಿದ್ದು, ಈ ಪ್ರಕ್ರಿಯೆ ವಿಜಯ್ ಅವರ ಮೃತದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರ ಮಾಡಲಿದ್ದು, ಬೆಳಿಗ್ಗೆ ೮-೧೦ ವೇಳೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ನಂತರ ವಿಜಯ್ ಅವರ ಹುಟ್ಟೂರಾದ ಚಿಕ್ಕಮಗಳೂರಿನ ಕಡೂರಿನ ಪಂಚನಹಳ್ಳಿಯಲ್ಲಿ ಅಂತ್ಯಸAಸ್ಕಾರ ನಡೆಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೋವಿಡ್-೧೯: ರಾಜ್ಯದಲ್ಲಿಂದು ೬೮೩೫ ಹೊಸ ಪ್ರಕರಣ
ಬೆಂಗಳೂರು, ಜೂ. ೧೪: ಕಳೆದ ೨೪ ಗಂಟೆಗಳಲ್ಲಿ ರಾಜ್ಯದಲ್ಲಿ ೬೮೩೫ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಸೋಂಕಿನ ಒಟ್ಟು ಖಚಿತ ಪ್ರಕರಣಗಳ ಸಂಖ್ಯೆ ೨೭೭೧೯೬೯ಕ್ಕೆ ಏರಿಕೆಯಾಗಿದೆ. ೧೫೪೦೯ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸೋಂಕಿನಿAದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ ೨೫೬೬೭೭೪ ಆಗಿದೆ. ಸೋಂಕಿನಿAದ ಇಂದು ೧೨೦ ಸೋಂಕಿತರು ಮೃತಪಟ್ಟಿದ್ದಾರೆ. ಈವರೆಗಿನ ಮೃತರ ಒಟ್ಟು ಸಂಖ್ಯೆ ೩೩೦೩೩ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಒಟ್ಟು ಸಂಖ್ಯೆ ೧೭೨೧೪೧ ಆಗಿದೆ. ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ ಶೇ.೪.೫೬ ರಷ್ಟಿದ್ದರೆ, ಮರಣ ಪ್ರಮಾಣ ಶೇ.೧.೭೫ ರಷ್ಟಿದೆ.ಬೆಂಗಳೂರು ನಗರದಲ್ಲಿ ೧೪೭೦ ಹೊಸ ಪ್ರಕರಣಗಳು ಪತ್ತೆಯಾಗಿದ್ದು, ೨೪೦೯ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ೧೨ ಮಂದಿ ಸಾವನ್ನಪ್ಪಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ೮೫೦೪೪ ಆಗಿದೆ.
ಪ್ರವಾಸೋದ್ಯಮ ಮಾರ್ಗದರ್ಶಿಗಳಿಗೆ ರೂ.೫೦೦೦ ಪರಿಹಾರ
ಬೆಂಗಳೂರು, ಜೂ. ೧೪: ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಾಯಿತವಾಗಿರುವ ಪ್ರವಾಸಿ ಮಾರ್ಗದರ್ಶಿಗಳಿಗೆ ಕೋವಿಡ್ ಸಂಕಷ್ಟದ ಪರಿಹಾರವಾಗಿ ರೂ.೫೦೦೦ ಹಣ ನೀಡಲು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ ಪ್ರಕಟಿಸಿದ್ದಾರೆ. ಪ್ರವಾಸೋದ್ಯಮ ಇಲಾಖೆಯಲ್ಲಿ ೩೮೪ ನೋಂದಾಯಿತ ಪ್ರವಾಸಿ ಗೈಡ್ಗಳಿದ್ದು, ಅವರೆಲ್ಲರಿಗೂ ಕೋವಿಡ್ ಸಂಕಷ್ಟದ ಸಮಯದಲ್ಲಿ ನೆರವಾಗಲು ನಿರ್ಧರಿಸಿದ್ದು, ಪ್ರತಿಯೊಬ್ಬರಿಗೂ ತಲಾ ರೂ.೫೦೦೦ ಗಳನ್ನು ಬಿಡುಗಡೆ ಮಾಡಲು ಆದೇಶಿಸಿರುತ್ತಾರೆ. ಹೊಟೇಲ್ ಕಾರ್ಮಿಕರಿಗೆ ಕೋಲ್ಡ್ ಪರಿಹಾರ ಪ್ಯಾಕೇಜ್ ಯೋಜನೆಯಡಿ ರೂ.೩೦೦೦ ಗಳನ್ನು ನೀಡಲು ಸಹ ಆರ್ಥಿಕ ಇಲಾಖೆಯಲ್ಲಿ ಚರ್ಚೆ ನಡೆಯುತ್ತಿದ್ದು, ಅತಿ ಶೀಘ್ರದಲ್ಲಿ ಸರ್ಕಾರಿ ಆದೇಶ ಹೊರಡಲಿದೆ ಎಂದು ಸಹ ಸಚಿವರು ಇದೇ ವೇಳೆ ತಿಳಿಸಿದ್ದಾರೆ. ಬೆಂಗಳೂರಿನ ಖನಿಜ ಭವನದಲ್ಲಿರುವ ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಸಂಸ್ಥೆ ಕಚೇರಿಯಲ್ಲಿ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಕೋವಿಡ್ ಲಾಕ್ಡೌನ್ನಿಂದ ಪ್ರವಾಸೋದ್ಯಮ ಕ್ಷೇತ್ರದ ಮೇಲಾಗಿರುವ ಪರಿಣಾಮಗಳ ಬಗ್ಗೆ ಮಾಹಿತಿ ಪಡೆದರು.
ಇಸ್ರೇಲ್ನಲ್ಲಿ ನೆತನ್ಯಾಹು ಅಧಿಕಾರ ಅಂತ್ಯ: ನಫ್ತಾಲಿ ಬೆನ್ನೆಟ್ ನೂತನ ಪ್ರಧಾನಿ
ಟೆಲ್ಅವಿವ್, ಜೂ. ೧೪: ಇಸ್ರೇಲ್ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ಸಂಭವಿಸಿದ್ದು, ೧೨ ವರ್ಷಗಳ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಡಳಿತ ಕೊನೆಗೊಂಡಿದೆ. ಸಂಸತ್ ನಲ್ಲಿ ಹೊಸ ಸಮ್ಮಿಶ್ರ ಸರ್ಕಾರ ರಚನೆಯ ಪರವಾಗಿ ಮತ ಚಲಾವಣೆಯಾಗಿದ್ದು, ರಾಷ್ಟಿçÃಯವಾದಿ ನೆಫ್ತಾಲಿ ಬೆನ್ನೆಟ್ ಸಮ್ಮಿಶ್ರ ಸರ್ಕಾರದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಇಸ್ರೆಲ್ ನ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಡಪಂಥೀಯ ಅರಬ್ ಯೇತರ ಪಕ್ಷಗಳು, ಸ್ವತಂತ್ರ ಅರಬ್ ಪಕ್ಷ ರಾಮ್ ರಾಷ್ಟಿçÃಯವಾದಿ ನೆಫ್ತಾಲಿ ಬೆನ್ನೆಟ್ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿದ್ದು, ಅನೂಹ್ಯವಾದ ರೀತಿಯಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಹೊಂದಿರುವ ಪಕ್ಷಗಳೇ ಸರ್ಕಾರ ರಚಿಸಿರುವುದು ಅಚ್ಚರಿ ಮೂಡಿಸಿದೆ. ಅತ್ಯಲ್ಪ ಬಹುಮತ ೬೦-೫೯ ರಿಂದ ಸರ್ಕಾರ ರಚನೆ ಮಾಡಲಾಗಿದ್ದು, ಅಧಿಕಾರ ಹಂಚಿಕೆಯ ಸೂತ್ರದ ಭಾಗವಾಗಿ ೨೦೨೩ ರ ಸೆಪ್ಟೆಂಬರ್ ತಿಂಗಳವರೆಗೂ ನಫ್ತಾಲಿ ಬೆನ್ನೆಟ್ ಅವರು ಪ್ರಧಾನಿಯಾಗಿ ಕಾರ್ಯನಿರ್ವಹಣೆ ಮಾಡಲಿದ್ದಾರೆ. ನಂತರ ನಫ್ತಾಲಿ ಬೆನ್ನೆಟ್ ಅವರು ಇನ್ನೆರಡು ವರ್ಷಗಳ ಆಡಳಿತಾವಧಿಯನ್ನು ಯೆಶ್ ಅಟಿಡ್ ಅವರಿಗೆ ಅಧಿಕಾರ ಬಿಟ್ಟುಕೊಡಲಿದ್ದಾರೆ. ನೆತನ್ಯಾಹು ದೀರ್ಘಾವಧಿ ಸೇವೆ ಸಲ್ಲಿಸಿದ ಇಸ್ರೆಲ್ ನ ಪ್ರಧಾನಿಯಾಗಿದ್ದು, ಲಿಕುಡ್ ಪಕ್ಷದ ಮುಖ್ಯಸ್ಥರಾಗಿ, ವಿಪಕ್ಷ ನಾಯಕರಾಗಿ ಮುಂದುವರೆಯಲಿದ್ದಾರೆ. ಸಂಸತ್ ನಲ್ಲಿ ನಡೆದ ಚರ್ಚೆಯ ವೇಳೆ "ನಾವು ವಾಪಸ್ಸಾಗಲಿದ್ದೇವೆ ಎಂದು ನೆತನ್ಯಾಹು ಹೇಳಿದ್ದಾರೆ.
ಕೋವಿಡ್-೧೯ ಮೂಲದ ಬಗ್ಗೆ ಆಧಾರ ಸಹಿತ ತನಿಖೆಗೆ ಜಿ-೭ ಒತ್ತಾಯ
ಲಂಡನ್, ಜೂ. ೧೪: ಜಿ-೭ ಶೃಂಗಸಭೆಯಲ್ಲಿ ಕೊರೊನಾ ಲಸಿಕೆಗೆ ಸಹಕಾರ ನೀಡುವುದೂ ಸೇರಿದಂತೆ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ಕೊರೊನಾ ಮೂಲದ ಪತ್ತೆ ಬಗ್ಗೆಯೂ ನಿರ್ಣಯ ಅಂಗೀಕರಿಸಲಾಗಿದೆ. ಸಮಯೋಚಿತ, ಪಾರದರ್ಶಕ, ತಜ್ಞರ ನೇತೃತ್ವದ ಮತ್ತು ವಿಜ್ಞಾನ ಆಧಾರಿತ, ಡಬ್ಲುö್ಯಹೆಚ್ಒ ಮೇಲ್ವಿಚಾರಣೆಯಲ್ಲಿ ಕೋವಿಡ್-೧೯ ಸೋಂಕು ಮೂಲದ ಪತ್ತೆ ಮಾಡಬೇಕಿದೆ ಎಂದು ಜಿ-೭ ನಾಯಕರು ಕರೆ ನೀಡಿದ್ದಾರೆ. ಚೀನಾದಲ್ಲಿ ಕೊರೊನಾ ವೈರಸ್ ಸೃಷ್ಟಿಯಾಗಿದೆ ಎಂಬ ಆರೋಪದ ತಜ್ಞರ ಆಯಾಮದಿಂದಲೂ ತನಿಖೆ ನಡೆಯಬೇಕೆಂದು ಜಿ-೭ ನಾಯಕರು ಹೇಳಿದ್ದಾರೆ. ೨೦೦೫ ರ ಆರೋಗ್ಯ ನಿಯಮಗಳ ಪಾಲನೆಯೆಡೆಗೆ ಇರುವ ನಮ್ಮ ಬದ್ಧತೆ, ನಮ್ಮ ಉತ್ತರದಾಯಿತ್ವದ ಸಾಮರ್ಥ್ಯ, ಪಾರದರ್ಶಕತೆ ಹೆಚ್ಚಿಸಿಕೊಳ್ಳುವುದಕ್ಕೆ ಜಿ-೭ ನಾಯಕರು ಕರೆ ನೀಡಿದ್ದಾರೆ. ಈ ಪೈಕಿ ಕೊರೊನಾ ಮೂಲವನ್ನು ಪತ್ತೆ ಮಾಡುವ ನಿರ್ಣಯವನ್ನೂ ಕೈಗೊಳ್ಳಲಾಗಿದೆ. ಕೊರೊನಾ ವುಹಾನ್ ನಿಂದ ಮೊದಲು ವರದಿಯಾಗಿ ೧.೫ ವರ್ಷಗಳೇ ಕಳೆದರೂ ಸಹ ಕೋವಿಡ್-೧೯ ಮೂಲ ರಹಸ್ಯವಾಗಿಯೇ ಉಳಿದಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಮೂಲ ಪತ್ತೆಗೆ ಈಗಾಗಲೇ ಬ್ರಿಟನ್ ಹಾಗೂ ಅಮೆರಿಕ ಅನುಮತಿ ನೀಡಾಗಿದೆ.
ಬೆಂಗಳೂರಿಗೆ ಬರುವ ವಲಸಿಗರಿಗೆ ಕೊರೊನಾ ಟೆಸ್ಟ್ ಕಡ್ಡಾಯ
ಬೆಂಗಳೂರು, ಜೂ. ೧೪: ಕರ್ನಾಟಕದಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭವಾಗುತ್ತಿದ್ದAತೆ ಬೇರೆ ರಾಜ್ಯಗಳು ಮತ್ತು ಜಿಲ್ಲೆಗಳಿಂದ ಬೆಂಗಳೂರಿಗೆ ಹರಿದುಬರುತ್ತಿರುವ ಜನರ ಸಂಖ್ಯೆ ಹೆಚ್ಚುತ್ತಿದ್ದು ಸೋಮವಾರ ಬೆಳಗ್ಗೆಯೇ ವಿಪರೀತ ಟ್ರಾಫಿಕ್ ಜಾಮ್ ಉಂಟಾಗಿದೆ. ಲಾಕ್ಡೌನ್ ಎಂದು ಹೊರಗೆ ಹೋದವರು ಬೆಂಗಳೂರಿಗೆ ಬರುತ್ತಿದ್ದು ಸಾವಿರಾರು ವಾಹನಗಳು ರಸ್ತೆಯಲ್ಲಿ ಓಡಾಡುತ್ತಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೊರಗಿನಿಂದ ಬೆಂಗಳೂರಿಗೆ ಬರುವವರಿಗೆ ಕಡ್ಡಾಯವಾಗಿ ಕೋವಿಡ್-೧೯ ಟೆಸ್ಟ್ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. ಬೆಂಗಳೂರಲ್ಲಿ ಸದ್ಯ ಸಕ್ರಿಯ ಕೋವಿಡ್ ಕೇಸುಗಳು ಕಡಿಮೆಯಾಗಿವೆ. ಹೊರಗಿನಿಂದ ಈ ಸಂದರ್ಭದಲ್ಲಿ ಜನರು ಹೆಚ್ಚೆಚ್ಚು ಬರುತ್ತಿದ್ದರೆ ಮುಂದಿನ ೧೫ ದಿನಗಳಲ್ಲಿ ನಗರದಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಏರಿಕೆಯಾಗುವ ಸಾಧ್ಯತೆಯಿದೆ. ಹೀಗಾಗಿ ಹೊರಗಿನಿಂದ ಬೆಂಗಳೂರಿಗೆ ಬರುವವರಿಗೆ ಕಡ್ಡಾಯವಾಗಿ ಪರಿಣಾಮಕಾರಿಯಾಗಿ ಕೊರೊನಾ ಟೆಸ್ಟ್ ಮಾಡಿಸುವ ಬಗ್ಗೆ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದು ಹೇಳಿದರು.