ಸಿದ್ದಾಪುರ, ಜೂ. ೧೪: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಸಿದ್ದಾಪುರದಲ್ಲಿ ಸಿಪಿಐಎಂ ಪಕ್ಷದ ವತಿಯಿಂದ ಪ್ರತಿಭಟನೆ ನಡೆಯಿತು. ಸಿಪಿಐ(ಎಂ) ಮುಖಂಡರಾದ ಎನ್.ಡಿ. ಕುಟ್ಟಪ್ಪನ್ ಕೇಂದ್ರದಲ್ಲಿ ಬಿಜೆಪಿ ಸರಕಾರವು ಅಧಿಕಾರಕ್ಕೆ ಬಂದ ನಂತರ ದೈನಂದಿನ ವಸ್ತುಗಳ ಬೆಲೆ ಗಗನಕ್ಕೇರಿದೆ. ಏಕಾಏಕಿ ಪೆಟ್ರೋಲ್-ಡೀಸೆಲ್ ಬೆಲೆಯನ್ನು ಏರಿಕೆ ಮಾಡಿದ ಹಿನ್ನೆಲೆಯಲ್ಲಿ ಸಾಮಾನ್ಯ ಜನರ ಬದುಕು ದುಸ್ತರವಾಗಿದೆ ಎಂದು ದೂರಿದರು.

ಈ ಸಂದರ್ಭ ಸಿಪಿಐ(ಎಂ) ಪಕ್ಷದ ಪದಾಧಿಕಾರಿಗಳಾದ ಬೈಜು, ಮುಸ್ತಫ, ಅಬ್ದುಲ್ ರಹೀಮಾನ್ ಇನ್ನಿತರರು ಹಾಜರಿದ್ದರು.