ಚೆಯ್ಯಂಡಾಣೆ, ಜೂ. ೧೫: ನಾಪೋಕ್ಲುವಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು, ಆಸ್ಪತ್ರೆಯ ಸಿಬ್ಬಂದಿ, ವೈದ್ಯಾಧಿಕಾರಿಗಳು, ನಾಪೋಕ್ಲು ಗ್ರಾಮ ಪಂಚಾಯಿತಿ ಸಿಬ್ಬಂದಿ, ನಾಡ ಕಚೇರಿ ಸಿಬ್ಬಂದಿ, ವ್ಯಾಕ್ಸಿನೆಷನ್ ಸೆಂಟರ್ ಸಿಬ್ಬಂದಿ, ಸ್ಥಳೀಯ ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ಜಂಟಿಯಾಗಿ ನಾಪೋಕ್ಲುವಿನ ಕರ್ನಾಟಕ ಮುಸ್ಲಿಂ ಜಮಾಅತ್ (ಏಒಎ) ಎಸ್.ವೈ.ಎಸ್, ಎಸ್.ಎಸ್.ಎಫ್, ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಭೋಜನದ ವ್ಯವಸ್ಥೆಯನ್ನು ಅಯೋಜಿಸಲಾಯಿತು.

ಅಲ್ಲದೆ ಕೊರೊನಾ ವಾರಿಯರ್ಸ್ಗಳಾದ ಸ್ಥಳೀಯ ವೈದ್ಯಾಧಿಕಾರಿ ಡಾ. ಪೂವಯ್ಯ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸಾಬಾ ತಿಮ್ಮಯ್ಯ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಸಂಘಟನೆಯ ವತಿಯಿಂದ ಕ್ವಾರಂಟೈನ್‌ನಲ್ಲಿರುವ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ಟುಗಳನ್ನು, ರಕ್ಷಣೆಗಾಗಿ ಆಸ್ಪತ್ರೆಯಲ್ಲಿರುವ ಕುಟುಂಬ ಸದಸ್ಯರಿಗೆ ಪಿಪಿಇ ಕಿಟ್‌ಗಳನ್ನು ನೀಡಿ ಆರೋಗ್ಯ ರಕ್ಷಣೆಗೆ ಪ್ರೋತ್ಸಾಹ ನೀಡಲಾಯಿತು.

ಖಾದರ್ ಉಸ್ತಾದರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಎಸ್‌ವೈಎಸ್ ಇಸಾಬಾ ತಂಡದ ರಾಜ್ಯ ಚೇರ್ಮೆನ್ ಚೆಯ್ಯಂಡಾಣೆ, ಜೂ. ೧೫: ನಾಪೋಕ್ಲುವಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು, ಆಸ್ಪತ್ರೆಯ ಸಿಬ್ಬಂದಿ, ವೈದ್ಯಾಧಿಕಾರಿಗಳು, ನಾಪೋಕ್ಲು ಗ್ರಾಮ ಪಂಚಾಯಿತಿ ಸಿಬ್ಬಂದಿ, ನಾಡ ಕಚೇರಿ ಸಿಬ್ಬಂದಿ, ವ್ಯಾಕ್ಸಿನೆಷನ್ ಸೆಂಟರ್ ಸಿಬ್ಬಂದಿ, ಸ್ಥಳೀಯ ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ಜಂಟಿಯಾಗಿ ನಾಪೋಕ್ಲುವಿನ ಕರ್ನಾಟಕ ಮುಸ್ಲಿಂ ಜಮಾಅತ್ (ಏಒಎ) ಎಸ್.ವೈ.ಎಸ್, ಎಸ್.ಎಸ್.ಎಫ್, ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಭೋಜನದ ವ್ಯವಸ್ಥೆಯನ್ನು ಅಯೋಜಿಸಲಾಯಿತು.

ಅಲ್ಲದೆ ಕೊರೊನಾ ವಾರಿಯರ್ಸ್ಗಳಾದ ಸ್ಥಳೀಯ ವೈದ್ಯಾಧಿಕಾರಿ ಡಾ. ಪೂವಯ್ಯ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸಾಬಾ ತಿಮ್ಮಯ್ಯ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಸಂಘಟನೆಯ ವತಿಯಿಂದ ಕ್ವಾರಂಟೈನ್‌ನಲ್ಲಿರುವ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ಟುಗಳನ್ನು, ರಕ್ಷಣೆಗಾಗಿ ಆಸ್ಪತ್ರೆಯಲ್ಲಿರುವ ಕುಟುಂಬ ಸದಸ್ಯರಿಗೆ ಪಿಪಿಇ ಕಿಟ್‌ಗಳನ್ನು ನೀಡಿ ಆರೋಗ್ಯ ರಕ್ಷಣೆಗೆ ಪ್ರೋತ್ಸಾಹ ನೀಡಲಾಯಿತು.

ಖಾದರ್ ಉಸ್ತಾದರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಎಸ್‌ವೈಎಸ್ ಇಸಾಬಾ ತಂಡದ ರಾಜ್ಯ ಚೇರ್ಮೆನ್ ಉಮ್ಮರ್ ಸಖಾಫಿ ಎಡಪಾಲ, ಅತಿಥಿಗಳಾಗಿ ಪಿ.ಎಂ. ಖಾಸಿಂ, ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಅಬ್ದುಲ್ ರಹಮಾನ್ ಎಂ.ಹೆಚ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಇಸ್ಮಾಯಿಲ್, ಸ್ಥಳೀಯ ಜಮಾಅತ್ ಅಧ್ಯಕ್ಷ ಸಲೀಂ ಹ್ಯಾರಿಸ್, ಮನ್ಸೂರ್ ಅಲಿ ಎಂ.ಎ, ಅಬ್ದುಲ್ ಅಝೀಜ್ ಹಾಜಿ, ಕಾರ್ಯದರ್ಶಿ ಅಹಮ್ಮದ್ ಸಿ.ಹೆಚ್, ಅರಾಫತ್ ಪಿ.ಎಂ, ಜಿಲ್ಲಾ ಎಸ್‌ಎಸ್‌ಎಫ್ ಕಾರ್ಯದರ್ಶಿ ರಫೀಕ್ ಲತೀಫಿ, ತಶ್ರೀಫ್, ಇಬ್ರಾಹಿಂ ಉಸ್ತಾದ್, ಅಬ್ದುಲ್ಲಾ ಬೇಕಲ್, ಜಬ್ಬಾರ್, ಶೌಕತ್, ಜುಬೈರ್, ಉಪಸ್ಥಿತರಿದ್ದರು. ಕಾರ್ಯಕ್ರಮದ ಸ್ವಾಗತವನ್ನು ವಂದನೆಯನ್ನು ಕ್ರಮವಾಗಿ ಹನೀಫ್ ಟಿ.ಎ. ಮನ್ಸೂರ್ ಅಲಿ ಎಂ.ಎ. ಮಾಡಿದರು.