ಮಡಿಕೇರಿ, ಜೂ. ೧೫: ಮಳೆಗಾಲ ಆರಂಭವಾಗಿದ್ದು, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಸಲುವಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಭೂ ಕುಸಿತವಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಕಳೆದ ೨೦೧೮ರಲ್ಲಿ ಭೂಕುಸಿತವಾದ ಮಕ್ಕಂದೂರು ಗ್ರಾ.ಪಂ.ಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಗ್ರಾ.ಪಂ. ವ್ಯಾಪ್ತಿಯ ಹೆಮ್ಮೆತ್ತಾಳು, ಉದಯಗಿರಿ, ಜಹಾಂಗೀರ್ ಪೈಸಾರಿ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸುವಂತೆ ಗ್ರಾಮ ಪಂಚಾಯಿತಿ ವತಿಯಿಂದ ಮಾಡಲಾದ ಮನವಿಗೆ ಸಕರಾತ್ಮಕವಾಗಿ ಜಿಲ್ಲಾಧಿಕಾರಿಗಳು ಸ್ಪಂದಿಸಿದರು. ಭೇಟಿ ಸಂದರ್ಭ ಗ್ರಾ.ಪಂ. ಅಧ್ಯಕ್ಷ ಸುಬ್ಬಯ್ಯ, ಉಪಾಧ್ಯಕ್ಷ ಕವಿತಾ, ಸದಸ್ಯರುಗಳು ಕಂದಾಯ ಅಧಿಕಾರಿಗಳು ಇದ್ದರು.