ಸಿದ್ದಾಪುರ, ಜೂ. ೧೫: ಪೆಟ್ರೋಲ್ ಹಾಗೂ ಡೀಸೆಲ್ ಮತ್ತು ವಿದ್ಯುತ್ ದರವನ್ನು ಏರಿಕೆ ಮಾಡಿರುವುದನ್ನು ಖಂಡಿಸಿ ಸಿಪಿಐಎಂ ಪಕ್ಷದ ನೆಲ್ಲಿಹುದಿಕೇರಿ ಗ್ರಾಮ ಸಮಿತಿ ವತಿಯಿಂದ ನೆಲ್ಲಿಹುದಿಕೇರಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಕಾರ್ಮಿಕ ಮುಖಂಡ ಭರತ್ ಮಾತನಾಡಿ; ಕೇಂದ್ರ ಸರ್ಕಾರವು ಆಗಿಂದ್ದಾಗೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿರುವುದರಿಂದ ಜನಸಾಮಾನ್ಯರು ಸಮಸ್ಯೆಗೆ ಸಿಲುಕಿಕೊಂಡಿದ್ದಾರೆ ಎಂದು ಆರೋಪಿಸಿದರು. ಕೂಡಲೇ ಬೆಲೆ ಏರಿಕೆಯನ್ನು ಕಡಿಮೆಗೊಳಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಮೋನಪ್ಪ, ಪಕ್ಷದ ಪದಾಧಿಕಾರಿಗಳಾದ ಉದಯಕುಮಾರ್, ಇತರರು ಹಾಜರಿದ್ದರು.