ಸಿದ್ದಾಪುರ, ಜೂ. ೧೬: ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಸೆರೆಹಿಡಿಯುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಲಾಕ್‌ಡೌನ್ ಸಂದರ್ಭದಲ್ಲಿ ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಖಚಿತ ಸುಳಿವಿನ ಮೇರೆಗೆ ಸಿದ್ದಾಪುರ ಠಾಣಾಧಿಕಾರಿ ಮೋಹನ್‌ರಾಜ್ ಹಾಗೂ ಸಿಬ್ಬಂದಿಗಳು ಸೇರಿ ಪಾಲಿಬೆಟ್ಟದ ಶಾಲೆ ರಸ್ತೆಯ ನಿವಾಸಿ ರದೀಶ್ ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.