ಮಡಿಕೇರಿ, ಜೂ.೧೬: ಜಿಲ್ಲೆಯಲ್ಲಿ ಬುಧವಾರ ೧೦೪ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೭೪ ಆರ್‌ಟಿಪಿಸಿಆರ್ ಮತ್ತು ೩೦ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ.

ಮಡಿಕೇರಿ ತಾಲೂಕಿನಲ್ಲಿ ೩೦, ಸೋಮವಾರಪೇಟೆ ತಾಲೂಕಿನಲ್ಲಿ ೪೩, ವೀರಾಜಪೇಟೆ ತಾಲೂಕಿನಲ್ಲಿ ೩೧ ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೨೭,೪೩೬ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೪೭೨ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೨೫,೮೯೭ ಮಂದಿ ಗುಣಮುಖರಾಗಿದ್ದಾರೆ. ೧೧೮೭ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧ ಸಾವು ಉಂಟಾಗಿದ್ದು, ಒಟ್ಟು ೩೫೨ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೧೯೩ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೪.೭ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.