ಸೋಮವಾರಪೇಟೆ, ಜೂ. ೧೫: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಶ್ರೀ ವೀರೇಂದ್ರ ಹೆಗ್ಗಡೆಯವರು ಕೊರೊನಾ ಸಂಕಷ್ಟದ ಸಮಯದಲ್ಲಿ ಮಾಡುತ್ತಿರುವ ಜನೋಪಯೋಗಿ ಕಾರ್ಯಗಳು ಶ್ಲಾಘನೀಯ ಎಂದು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಹೇಳಿದರು. ಯೋಜನೆಯ ವತಿಯಿಂದ ತಾಲೂಕಿನ ೨೫೦ ಬಡ ಕುಟುಂಬಗಳಿಗೆ ನೀಡಲಾಗುತ್ತಿರುವ ದಿನಸಿ ಸಾಮಗ್ರಿಗಳ ಕಿಟ್ಗಳನ್ನು ವಿತರಿಸಿ ಮಾತನಾಡಿದ ಅವರು, ಈ ಹಿಂದೆ ಕೊಡಗಿನಲ್ಲಿ ಭೂಕುಸಿತ ಸಂಭವಿಸಿದಾಗಲೂ ಯೋಜನೆಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಯ ಮೂಲಕ ನೆರವು ನೀಡಲಾಗಿದೆ ಎಂದು ಸ್ಮರಿಸಿದರು.
ಪ್ರಸ್ತುತ ಕೊರೊನಾದಿಂದಾಗಿ ಲಾಕ್ಡೌನ್ ಇರುವುದರಿಂದ ಹಲವಷ್ಟು ಬಡ ಕುಟುಂಬಗಳಿಗೆ ಸ್ವಯಂಸೇವಾ ಸಂಘಗಳು ಸವಲತ್ತು ಒದಗಿಸುತ್ತಿವೆ. ಸರ್ಕಾರವೂ ಆಹಾರ ಇಲಾಖೆ ಮೂಲಕ ಪಡಿತರ ನೀಡುತ್ತಿದೆ. ಇದರೊಂದಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ೨೫೦ ಬಡ ಅಶಕ್ತ ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಕಿಟ್ ನೀಡುತ್ತಿರುವುದು ಶ್ಲಾಘನೀಯ ಎಂದರು. ಈ ಸಂದರ್ಭ ಉಪಸ್ಥಿತರಿದ್ದ ಯೋಜನೆಯ ಜಿಲ್ಲಾ ನಿರ್ದೇಶಕ ಡಾ. ಯೋಗೇಶ್ ಮಾತನಾಡಿ, ಶಾಸಕರ ಕಚೇರಿಯಲ್ಲಿ ೩೦ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸುವ ಮೂಲಕ ಅಭಿಯಾನಕ್ಕೆ ಸಾಂಕೇತಿಕ ಚಾಲನೆ ನೀಡಲಾಗಿದೆ. ಉಳಿದ ಕುಟುಂಬಗಳಿಗೆ ಮನೆ ಮನೆಗೆ ಕಿಟ್ಗಳನ್ನು ತಲುಪಿಸಲಾಗುವುದು ಎಂದರು.
ಯೋಜನೆಯಿAದ ಈಗಾಗಲೇ ಜಿಲ್ಲಾಸ್ಪತ್ರೆಗೆ ೫ ಆಕ್ಸಿಜನ್ ಕಾನ್ಸನ್ಟ್ರೇಟರ್ ನೀಡಲಾಗಿದೆ. ಪ್ರತಿ ತಾಲೂಕಿನಲ್ಲೂ ಕೋವಿಡ್ ಸೋಂಕಿತರು, ಗಂಟಲು ದ್ರವ ಪರೀಕ್ಷೆಗೆ ಆಗಮಿಸುವ ಮಂದಿಯನ್ನು ಮನೆಯಿಂದ ಆಸ್ಪತ್ರೆಗೆ ಹಾಗೂ ಆಸ್ಪತ್ರೆಯಿಂದ ಮನೆಗೆ ಸಾಗಿಸಲು ಯೋಜನೆಯಿಂದ ೨ ವಾಹನಗಳನ್ನು ಉಚಿತ ಸೇವೆಗೆ ನಿಯೋಜಿಸಿ ನೆರವು ಒದಗಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿ.ಪಂ. ಮಾಜೀ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಚೌಡ್ಲು ಗ್ರಾ.ಪಂ. ಉಪಾಧ್ಯಕ್ಷೆ ಮಂಜುಳಾ ಸುಬ್ರಮಣಿ, ಯೋಜನೆಯ ತಾಲೂಕು ಯೋಜನಾಧಿಕಾರಿ ಜಯಂತಿ, ಮೇಲ್ವಿಚಾರಕರಾದ ಸಂತೋಷ್, ಕೇಶವ್, ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಎಂ.ಎಸ್. ಪದ್ಮ, ಸೇವಾ ಪ್ರತಿನಿಧಿ ತಾರಾಲಕ್ಷಿö್ಮÃ, ಪುಷ್ಪಾವತಿ, ನಿಖಿತ ಸೇರಿದಂತೆ ಇತರರು ಉಪಸ್ಥಿತರಿದ್ದರು.