ಮಡಿಕೇರಿ, ಜೂ. ೧೫: ಖಾಸಗಿ ಕ್ಲಿನಿಕ್‌ನಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾ ಆರೋಗ್ಯಾಧಿಕಾರಿಗಳ ತಂಡ ಕ್ಲಿನಿಕ್‌ನ ಸಂಬAಧಿಸಿದವರಿಗೆ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡದಂತೆ ಎಚ್ಚರಿಕೆ ನೀಡಿದೆ.

ನಾಪೋಕ್ಲುವಿನಲ್ಲಿ ಖಾಸಗಿ ಕ್ಲಿನಿಕ್‌ನಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ಮಾಡಿದೆ. ಇನ್ನು ಮುಂದಕ್ಕೆ ಯಾವದೇ ಪರೀಕ್ಷೆ, ಚಿಕಿತ್ಸೆ ನೀಡದಂತೆ ಎಚ್ಚರಿಕೆ ನೀಡಲಾಗಿದ್ದು, ತಾ. ೧೬ ರಂದು (ಇಂದು) ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಮುಂದಿನ ತೀರ್ಮಾನ ಕೈಗೊಳ್ಳುವದಾಗಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮೋಹನ್ ತಿಳಿಸಿದ್ದಾರೆ.