ಕೂಡಿಗೆ, ಜೂ. ೧೬: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಲು ಸಿದ್ಧತೆ ಮಾಡಿಕೊಂಡಿರುವ ಒಣ ಕಸ ವಿಲೇವಾರಿ ಘಟಕದ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಲಕ್ಷಿö್ಮ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಬ್ಯಾಡಗೊಟ್ಟ ಗ್ರಾಮದ ದಿಡ್ಡಳ್ಳಿ ಪುನರ್ವಸತಿ ಕೇಂದ್ರದಿAದ ಬಹುದೂರದಲ್ಲಿ ಒಣ ಕಸ ವಿಲೇವಾರಿ ಘಟಕ ಮತ್ತು ಇನ್ನೊಂದು ಭಾಗದಲ್ಲಿ ಪಾರ್ಕ್ ಮಾಡಲು ಉದ್ದೇಶಿಸಿರುವ ಜಾಗಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು. ಈ ಕೇಂದ್ರಕ್ಕೆ ಅನುಕೂಲವಾಗುವಂತೆ, ಕಸವನ್ನು ಸಮರ್ಪಕವಾಗಿ ವಿಂಗಡಿಸಿ ಯಾವುದೇ ರೀತಿಯ ತೊಂದರೆಗಳು ಆಗದಂತೆ ವೈಜ್ಞಾನಿಕ ಮಾದರಿಯಲ್ಲಿ ಒಣ ಕಸವನ್ನು ಬೇರ್ಪಡಿಸಿ ಬೇರೆ ಕಡೆಗೆ ಕಳುಹಿಸುವ ಕೇಂದ್ರದ ಕಾಮಗಾರಿಯ ಕೆಲಸ ನಡೆಯುತ್ತಿದೆ.

ಈ ಸಂದರ್ಭ ತಾಲೂಕು ತಹಶೀಲ್ದಾರ್ ಗೋವಿಂದರಾಜ್, ಜಿಲ್ಲಾ ಗಿರಿಜನ ಸಮನ್ವಯ ಅಧಿಕಾರಿ ಶಿವಕುಮಾರ್, ಕುಶಾಲನಗರ ನಾಡ ಕಚೇರಿಯ ಕಂದಾಯ ಪರಿವೀಕ್ಷಕ ಸಂತೋಷ್, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಟಿ.ಪಿ. ಹಮೀದ್, ಜಯಶ್ರೀ ಅರುಣು ಕುಮಾರ, ಶಿವಶಂಕರ್, ಪಲ್ಲವಿ, ಅಭಿವೃದ್ಧಿ ಅಧಿಕಾರಿ ಕೆ.ಎಂ. ಅಯಿಷಾ, ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್ ಸೇರಿದಂತೆ ದಿಡ್ಡಳ್ಳಿ ಪುನರ್ವಸತಿ ಕೇಂದ್ರ ಗ್ರಾಮಸ್ಥರು ಇದ್ದರು.